ಶುಕ್ರವಾರ, 12 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

Fact Check: NEET ಅಕ್ರಮದ ಆರೋಪಿಗಳು ಕಾಂಗ್ರೆಸ್‌ ಕಚೇರಿಯಲ್ಲಿ ಅವಿತಿರಲಿಲ್ಲ

Fact Check
Published 25 ಜೂನ್ 2024, 18:54 IST
Last Updated 25 ಜೂನ್ 2024, 18:54 IST
ಅಕ್ಷರ ಗಾತ್ರ

‘ನೀಟ್‌ ಪರೀಕ್ಷೆಗೆ ಸಂಬಂಧಿಸಿ ಆರು ಮಂದಿಯನ್ನು ಜಾರ್ಖಂಡ್‌ನಲ್ಲಿ ಬಂಧಿಸಲಾಗಿದೆ. ಇವರೆಲ್ಲರೂ ಇಲ್ಲಿನ ಕಾಂಗ್ರೆಸ್‌ ಕಚೇರಿಯಲ್ಲಿ ಬಚ್ಚಿಟ್ಟುಕೊಂಡಿದ್ದರು’ ಎಂದು ಆರೋಪಿಸುವ ವಿಡಿಯೊವೊಂದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಡುತ್ತಿದೆ. ಹಲವು ಬಿಜೆಪಿ ನಾಯಕರೂ ಈ ಆರೋಪ ಇರುವ ವಿಡಿಯೊವನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೊವನ್ನು ಹಂಚಿಕೊಂಡಿರುವ ಕೆಲವು ‘ಎಕ್ಸ್‌’ ಖಾತೆದಾರರು, ‘ಈ ಬಗ್ಗೆ ರಾಹುಲ್‌ ಬಾಬಾ ಏನೆನ್ನುತ್ತಾರೆ? ಬಿಜೆಪಿ ಹಾಗೂ ಮೋದಿ ಅವರನ್ನು ಅವಮಾನಿಸಲು ಕಾಂಗ್ರೆಸ್‌ ನಡೆಸಿರುವ ಹಂಚಿನ ಭಾಗವೇ ಇದು? ಇದಕ್ಕೆ ಉತ್ತರ ಹೌದು ಎನ್ನುವುದಾಗಿದೆ’ ಎಂದು ಬರೆದುಕೊಂಡಿದ್ದಾರೆ. ಆದರೆ, ಇದು ಸುಳ್ಳು ಸುದ್ದಿ.

ನೀಟ್‌ ಪರೀಕ್ಷೆಯ ಅಕ್ರಮಗಳ ಕುರಿತು ಬಿಹಾರದಲ್ಲಿ ದೂರು ದಾಖಲಾಗಿತ್ತು. ಈ ಬಗ್ಗೆ ತನಿಖೆ ನಡೆಸಿದ ಬಿಹಾರ ಪೊಲೀಸರು ಆರು ಮಂದಿಯನ್ನು ಜಾರ್ಖಂಡ್‌ನಲ್ಲಿ ಬಂಧಿಸಿದ್ದರು. ಆದರೆ, ಅವರನ್ನು ಬಂಧಿಸಿದ್ದು ಜಾರ್ಖಂಡ್‌ನ ದೇವಧರ್‌ ಜಿಲ್ಲೆಯಲ್ಲಿರುವ ಏಮ್ಸ್‌ ಆಸ್ಪತ್ರೆಯ ಪಕ್ಕದಲ್ಲಿರುವ ಮನೆಯೊಂದರಲ್ಲಿ. ಮನೆಯೊಂದರಿಂದಲೇ ಆರೋಪಿಗಳನ್ನು ಬಂಧಿಸಿರುವುದಾಗಿ ಬಿಹಾರ ಪೊಲೀಸರು ಸ್ಪಷ್ಟಪಡಿಸಿದ್ದಾರೆ. ಆದ್ದರಿಂದ, ನೀಟ್‌ ಅಕ್ರಮದ ಆರೋಪಿಗಳನ್ನು ಕಾಂಗ್ರೆಸ್‌ ಕಚೇರಿಯಿಂದ ಬಂಧಿಸಲಾಗಿಲ್ಲ ಮತ್ತು ಆರೋಪಿಗಳು ಕಾಂಗ್ರೆಸ್‌ ಕಚೇರಿಯಲ್ಲಿ ಬಚ್ಚಿಟ್ಟುಕೊಂಡಿರಲಿಲ್ಲ ಎಂಬುದು ಖಚಿತವಾಗುತ್ತದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT