ಉದ್ಯಮಿ ಗೌತಮ್ ಅದಾನಿ, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಡೊಭಾಲ್ ಅವರು ಅಮೆರಿಕಕ್ಕೆ ಭೇಟಿ ನೀಡುವುದನ್ನು ನಿರ್ಬಂಧಿಸಲಾಗಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕೆನಡಾಕ್ಕೆ ಪ್ರಯಾಣ ಮಾಡುವುದಕ್ಕೆ ಅಲ್ಲಿನ ಸರ್ಕಾರ ನಿರ್ಬಂಧ ವಿಧಿಸಿದೆ ಎಂದು ಹೇಳಿಕೊಳ್ಳುವ ಪೋಸ್ಟ್ಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಅಮೆರಿಕದ ನ್ಯಾಯಾಂಗ ಇಲಾಖೆಯು ಅದಾನಿ ಮತ್ತು ಇತರರ ವಿರುದ್ಧ ಇತ್ತೀಚೆಗೆ ಆರೋಪ ಪಟ್ಟಿ ಸಲ್ಲಿಸಿರುವುದು ಹಾಗೂ ಖಾಲಿಸ್ತಾನಿ ಪ್ರತ್ಯೇಕತಾವಾದಿ ನಿಜ್ಜರ್ ಹತ್ಯೆಗೆ ಸಂಬಂಧಿಸಿದಂತೆ ಭಾರತ ಮತ್ತು ಕೆನಡಾದ ನಡುವೆ ಉಂಟಾಗಿರುವ ರಾಜತಾಂತ್ರಿಕ ಬಿಟ್ಟಿನ ಕಾರಣ ಈ ಪೋಸ್ಟ್ಗಳನ್ನು ಹಂಚಿಕೊಳ್ಳಲಾಗುತ್ತಿದೆ. ಆದರೆ, ಇವೆರಡೂ ಸುಳ್ಳು ಸುದ್ದಿ.

ಗೂಗಲ್ನಲ್ಲಿ ನಿಗದಿತ ಪದಗಳನ್ನು ಹಾಕಿ ಹುಡುಕಾಟ ನಡೆಸಿದಾಗ ಈ ಪೋಸ್ಟ್ಗಳನ್ನು ಹಲವರು ಹಂಚಿಕೊಂಡಿರುವುದು ಕಂಡು ಬಂತು. ‘ಮೋದಿಯವರ ಆಪ್ತ ಅದಾನಿ, ಅಮಿತ್ ಶಾ ಮತ್ತು ಅಜಿತ್ ಡೊಭಾಲ್ ಅವರು ಅಮೆರಿಕ ಅಥವಾ ಕೆನಡಾಕ್ಕೆ ಪ್ರಯಾಣಿಸುವಂತಿಲ್ಲ’ ಎಂಬ ತಲೆಬರಹದಲ್ಲಿ ಇಂಡಿಯನ್ ಹೆರಾಲ್ಡ್ ಎಂಬ ಮಾಧ್ಯಮದಲ್ಲಿ ಬಂದಿರುವ ವರದಿಯೂ ಸಿಕ್ಕಿತು. ಆ ವರದಿಯಲ್ಲಿ ಅಧಿಕಾರಿಗಳ ಪ್ರತಿಕ್ರಿಯೆ ಇರಲಿಲ್ಲ. ಅಮೆರಿಕದ ವಿದೇಶಾಂಗ ಇಲಾಖೆಯ ವೆಬ್ಸೈಟ್ಗೆ ಭೇಟಿ ನೀಡಿ ಪರಿಶೀಲಿಸಿದಾಗ ಅದರಲ್ಲಿ ಭೇಟಿ ನಿರ್ಬಂಧದ ಬಗ್ಗೆ ಯಾವುದೇ ಮಾಹಿತಿ ಸಿಗಲಿಲ್ಲ. ಈ ಬಗ್ಗೆ ಅಮೆರಿಕ ಮತ್ತು ಕೆನಡಾ ಸರ್ಕಾರಗಳಾಗಲಿ ಅಧಿಕೃತವಾಗಿ ಯಾವುದೇ ಹೇಳಿಕೆಯನ್ನೂ ನೀಡಿಲ್ಲ ಎಂದು ಪಿಟಿಐ ಫ್ಯಾಕ್ಟ್ಚೆಕ್ ವರದಿ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.