ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಜೂ.4ರ ಬಳಿಕ ನಿತೀಶ್ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡಿದ್ದಾರೆ ಎನ್ನುವುದು ಸುಳ್ಳು

Published 11 ಜೂನ್ 2024, 23:34 IST
Last Updated 11 ಜೂನ್ 2024, 23:34 IST
ಅಕ್ಷರ ಗಾತ್ರ

ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್‌ ಗಾಂಧಿ ಅವರನ್ನು ಭೇಟಿ ಮಾಡುತ್ತಿರುವ, ಇದೇ ವೇಳೆ ನಿತೀಶ್‌ ಅವರೊಂದಿಗೆ ಆರ್‌ಜೆಡಿ ಪಕ್ಷದ ತೇಜಸ್ವಿ ಯಾದವ್‌ ಅವರೂ ಇರುವ ವಿಡಿಯೊವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟಗೊಂಡ ಜೂನ್‌ 4ರ ನಂತರದಿಂದ ಈ ವಿಡಿಯೊವನ್ನು ಹಂಚಿಕೊಳ್ಳಲಾಗುತ್ತಿದೆ. ‘ಏನಾಯಿತು? ರಾಜಕೀಯದ ಪಟ್ಟುಗಳು ಇನ್ನೂ ಮುಗಿದಿಲ್ಲ. ‘ಇಂಡಿಯಾ’ ಮೈತ್ರಿಕೂಟ ಸರ್ಕಾರ ರಚಿಸಲಿದೆ’ ಎಂಬ ಬರಹಗಳನ್ನು ಈ ವಿಡಿಯೊದೊಂದಿಗೆ ಪೋಸ್ಟ್‌ ಮಾಡಲಾಗುತ್ತಿದೆ. ಆದರೆ, ಇದು ಸುಳ್ಳು ಸುದ್ದಿ.

ನಿತೀಶ್‌ ಕುಮಾರ್ ಅವರು ವಿರೋಧ ಪಕ್ಷಗಳನ್ನು ಒಗ್ಗೂಡಿಸಿ, ಬಿಜೆಪಿ ವಿರುದ್ಧ ಚುನಾವಣೆಯಲ್ಲಿ ಸ್ಪರ್ಧಿಸಬೇಕು ಎಂದು ಹೊರಟವರಲ್ಲಿ ಮೊದಲಿಗರು. ಹೀಗೆ ವಿರೋಧ ಪಕ್ಷಗಳ ಗುಂಪನ್ನು ರಚಿಸುವ ವೇಳೆ 2023ರ ಆಗಸ್ಟ್‌ನಲ್ಲಿ ನಿತೀಶ್‌ ಅವರು ಕಾಂಗ್ರೆಸ್‌ ನಾಯಕರನ್ನು ಭೇಟಿ ಮಾಡಿದ್ದರು. ನಂತರ, 2024ರ ಜನವರಿಯಲ್ಲಿ ನಿತೀಶ್‌ ಮತ್ತೊಮ್ಮೆ ಎನ್‌ಡಿಎ ಸೇರಿಕೊಂಡರು. ಆ ಬಳಿಕ ಅವರು ಕಾಂಗ್ರೆಸ್‌ ನಾಯಕರನ್ನು ಭೇಟಿ ಮಾಡಿಲ್ಲ.  ಕಳೆದ ವರ್ಷದ ವಿಡಿಯೊವನ್ನು ಲೋಕಸಭಾ ಚುನಾವಣೆಯ ಫಲಿತಾಂಶದ ನಂತರದಲ್ಲಿ ಹಂಚಿಕೊಳ್ಳಲಾಗುತ್ತಿದೆ ಎಂದು ಬೂಮ್‌ಲೈವ್‌ ಫ್ಯಾಕ್ಟ್‌ಚೆಕ್‌ ಪ್ರಕಟಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT