ಗುರುವಾರ, 23 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಫ್ಯಾಕ್ಟ್ ಚೆಕ್: ವ್ಯಕ್ತಿಯೊಬ್ಬನನ್ನು ಗುಂಪೊಂದು ಥಳಿಸುತ್ತಿರುವ ವಿಡಿಯೊ

Last Updated 8 ಮೇ 2022, 23:30 IST
ಅಕ್ಷರ ಗಾತ್ರ

ವ್ಯಕ್ತಿಯೊಬ್ಬನನ್ನು ಗುಂಪೊಂದು ಮನಬಂದಂತೆ ಥಳಿಸುತ್ತಿರುವ ವಿಡಿಯೊವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ. ಥಳಿತಕ್ಕೊಳಗಾದ ವ್ಯಕ್ತಿಯ ದೇಹದ ಹಲವು ಭಾಗಗಳಿಂದ ರಕ್ತ ಸುರಿಯುತ್ತಿದ್ದರೂ ಗುಂಪು ಆತನನ್ನು ಥಳಿಸುವುದನ್ನು ಮುಂದುವರಿಸುತ್ತದೆ. ‘ರಾಜಸ್ಥಾನದ ಜೋಧ್‌ಪುರದಲ್ಲಿಈದ್‌ ಹಬ್ಬದ ಸಮಯದಲ್ಲಿ ನಡೆದ ಕೋಮುಗಲಭೆಗೆ ಸಂಬಂಧಿಸಿದ ದೃಶ್ಯ ಇದು. ಹಿಂದೂ ವ್ಯಕ್ತಿಯನ್ನು ಮುಸ್ಲಿಮರು ಹೊಡೆದು ಕೊಂದಿದ್ದಾರೆ. ಮುಸ್ಲಿಮರು ಹಿಂದೂಗಳನ್ನು ಕೊಲ್ಲಲಿ ಎಂದುರಾಜಸ್ಥಾನ ಮುಖ್ಯಮಂತ್ರಿ ಅಶೋಕ್‌ ಗೆಹಲೋತ್‌ ಅವರು ಇಂಟರ್‌ನೆಟ್‌ ಅನ್ನು ಸ್ಥಗಿತಗೊಳಿಸಿದ್ದಾರೆ’ ಎಂಬ ವಿವರವನ್ನು ವಿಡಿಯೊಗೆ ನೀಡಲಾಗಿದೆ.

ಈ ವಿಡಿಯೊ ಮತ್ತು ಜೋಧ್‌ಪುರದಲ್ಲಿ ನಡೆದ ಕೋಮುಗಲಭೆಗೆ ಸಂಬಂಧವಿಲ್ಲ ಎಂದು ‘ದಿ ಲಾಜಿಕಲ್‌ ಇಂಡಿಯನ್‌’ ವೇದಿಕೆ ವರದಿ ಮಾಡಿದೆ. ವಿಡಿಯೊದಲ್ಲಿ ಸೆರೆ ಆಗಿರುವ ಘಟನೆ ನಡೆದಿರುವುದು ಹರಿಯಾಣದ ಯಮುನಾನಗರದ ಸಧೌರ ಪ್ರದೇಶದಲ್ಲಿ.ಕೋಮು ದ್ವೇಷದ ಕಾರಣ ಈ ಥಳಿತ ನಡೆದಿಲ್ಲ. 10ರಿಂದ 12 ಜನರ ಗುಂಪೊಂದು ಹಳೆಯ ವೈಷಮ್ಯದ ಕಾರಣಕ್ಕೆ ಲಾರಿ ಚಾಲಕ ಕಮಲ್‌ಜೀತ್‌ ಎಂಬುವವರನ್ನು ಥಳಿಸಿದೆ. ಈ ಪ್ರಕರಣದ ತನಿಖೆ ನಡೆಯುತ್ತಿದೆ. ಆರೋಪಿಗಳಲ್ಲಿ ಒಬ್ಬ ಮುಸ್ಲಿಂ ವ್ಯಕ್ತಿ ಇದ್ದಾನೆ. ಆದರೆ ಇದು ವೈಯಕ್ತಿಕ ಕಾರಣಕ್ಕೆ ನಡೆದ ಥಳಿತ ಎಂದು ಯಮುನಾನಗರ ಎಸ್‌ಪಿ ತಿಳಿಸಿದ್ದಾರೆ ಎಂದು ಫ್ಯಾಕ್ಟ್‌ಚೆಕ್‌ನಲ್ಲಿ ವಿವರಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT