ಪಹಲ್ಗಾಮ್ ಭಯೋತ್ಪಾದನಾ ದಾಳಿಗೆ ಪ್ರತೀಕಾರವಾಗಿ ಭಾರತವು ಪಾಕಿಸ್ತಾನದ ವಿರುದ್ಧ ಕೈಗೊಂಡಿದ್ದ ‘ಆಪರೇಷನ್ ಸಿಂಧೂರ’ ನಂತರ ನಡೆದಿದ್ದ ಸೇನಾ ಸಂಘರ್ಷದಲ್ಲಿ ಭಾರತ ಮೂರು ರಫೇಲ್ ಯುದ್ಧ ವಿಮಾನಗಳನ್ನು ಕಳೆದುಕೊಂಡಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್ ಅವರು ಹೇಳಿದ್ದಾರೆ ಎನ್ನಲಾದ ವಿಡಿಯೊ ತುಣುಕೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಆದರೆ, ಇದು ಸುಳ್ಳು.