ಶುಕ್ರವಾರ, 20 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

Fact Check: ಹತ್ಯೆಗೀಡಾದ ವೈದ್ಯೆ ದೇಹದಲ್ಲಿ 150 ಗ್ರಾಂ ವೀರ್ಯ ಪತ್ತೆಯಾಗಿಲ್ಲ

Published : 21 ಆಗಸ್ಟ್ 2024, 23:33 IST
Last Updated : 21 ಆಗಸ್ಟ್ 2024, 23:33 IST
ಫಾಲೋ ಮಾಡಿ
Comments

ಕೋಲ್ಕತ್ತದ ಆರ್‌ಜಿ ಕರ್‌ ಆಸ್ಪತ್ರೆಯಲ್ಲಿ ಅತ್ಯಾಚಾರಕ್ಕೆ ಒಳಗಾಗಿ, ಹತ್ಯೆಗೀಡಾದ ಟ್ರೈನಿ ವೈದ್ಯೆಯ ದೇಹದಲ್ಲಿ150 ಮಿಲಿ ಗ್ರಾಂನಷ್ಟು (150mg) ವೀರ್ಯ ಪತ್ತೆಯಾಗಿದೆ ಎಂದು ಸುದ್ದಿಯಾಗಿತ್ತು. ಹಲವು ಸಾಮಾಜಿಕ ಜಾಲತಾಣ ಬಳಕೆದಾರರು ತಮ್ಮ ಖಾತೆಗಳಲ್ಲಿ ಈ ಬಗ್ಗೆ ಪೋಸ್ಟ್‌ ಮಾಡಿದ್ದರು. ಹಲವು ಮಾಧ್ಯಮಗಳೂ ಸುದ್ದಿ ಮಾಡಿದ್ದವು. ತಮ್ಮ ವಾದಕ್ಕೆ ಬಹುತೇಕರು ಮರಣೋತ್ತರ ಪರೀಕ್ಷೆಯ ವರದಿಯನ್ನು ಮೂಲವನ್ನಾಗಿ ಉಲ್ಲೇಖಿಸಿದ್ದರು. ಕೆಲವು ಸಾಮಾಜಿಕ ಜಾಲತಾಣಗಳ ಬಳಕೆದಾರರು 150 ಗ್ರಾಂನಷ್ಟು ವೀರ್ಯ ಕಂಡು ಬಂದಿದೆ ಎಂದೂ ಪೋಸ್ಟ್‌ ಮಾಡಿದ್ದರು. ಆದರೆ, ಇದು ಸುಳ್ಳು. 

ಮರಣೋತ್ತರ ಪರೀಕ್ಷೆ ವರದಿಯಲ್ಲಿ 151 ಗ್ರಾಂ ಎಂಬ ಉಲ್ಲೇಖ ಇರುವುದು ನಿಜ. ಆದರೆ, ಅದು ವೀರ್ಯ ಅಲ್ಲ. ಸಂತ್ರಸ್ತೆಯ ಜನನಾಂಗದ ಒಟ್ಟು ತೂಕದ ( ಆಂತರಿಕ ಮತ್ತು ಬಾಹ್ಯ ಅಂಗಗಳನ್ನೊಳಗೊಂಡು– weight of internal and external genitalia)  ಪ್ರಮಾಣ ಎಂದು ಭಾರತೀಯ ವೈದ್ಯಕೀಯ ಒಕ್ಕೂಟದ ಮಾಜಿ ಅಧ್ಯಕ್ಷ ಡಾ.ಜೆ.ಎ.ಜಯ್‌ಲಾಲ್‌ ‘ಬೂಮ್‌ಲೈವ್‌’ಗೆ ತಿಳಿಸಿದ್ದಾರೆ. ಈ ಪ್ರಕರಣದ ಬಗ್ಗೆ ಸ್ವಯಂಪ್ರೇರಿತವಾಗಿ ವಿಚಾರಣೆ ನಡೆಸುತ್ತಿರುವ ಸುಪ್ರೀಂ ಕೋರ್ಟ್‌ನಲ್ಲಿ ವಾದ ಮಂಡಿಸುವಾಗ ಪಶ್ಚಿಮ ಬಂಗಾಳ ಸರ್ಕಾರ ಕೂಡ ಇದೇ ಅಂಶವನ್ನು ಉಲ್ಲೇಖಿಸಿದೆ ಎಂದು ಬೂಮ್‌ ಫ್ಯಾಕ್ಟ್‌ಚೆಕ್‌ ತಿಳಿಸಿದೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT