ಉಕ್ರೇನ್ ಮೇಲೆ ರಷ್ಯಾ ದಾಳಿ ನಡೆಸಿದೆ. ಈ ವಿಚಾರದಲ್ಲಿ ಮಧ್ಯಪ್ರವೇಶಿಸಿದರೆ ಭಾರತ ಬೆಲೆ ತೆರಬೇಕಾಗುತ್ತದೆ ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಎಚ್ಚರಿಸಿದ್ದಾರೆ ಎಂದು ಹೇಳಲಾಗುವ ಚಿತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಸಿಎನ್‌ಎನ್ ಸುದ್ದಿವಾಹಿನಿಯಿಂದ ಸ್ಕ್ರೀನ್‌ಶಾಟ್ ಮಾಡಿದ್ದೆಂದು ಹೇಳಲಾದ ಚಿತ್ರದ ಅಡಿಯಲ್ಲಿ ಭಾರತಕ್ಕೆ ಪುಟಿನ್ ಎಚ್ಚರಿಕೆ ನೀಡಿರುವ ಉಲ್ಲೇಖವಿದೆ. ಹಲವರು ಈ ಚಿತ್ರವನ್ನು ಹಂಚಿಕೊಂಡಿದ್ದಾರೆ.

ಈವರೆಗೆ ಭಾರತಕ್ಕೆ ಪುಟಿನ್ ಇಂತಹ ಎಚ್ಚರಿಕೆ ನೀಡಿಲ್ಲ ಎಂದು ‘ಇಂಡಿಯಾ ಟುಡೆ’ ವರದಿ ಮಾಡಿದೆ. ಉಕ್ರೇನ್ ಮೇಲೆ ದಾಳಿ ಘೋಷಿಸುವಾಗ ಪುಟಿನ್ ಅವರು ಭಾರತದ ಹೆಸರನ್ನು ಎಲ್ಲಿಯೂ ಉಲ್ಲೇಖಿಸಿಲ್ಲ. ಆದರೆ ಭಾರತವು ಈ ವಿಚಾರದಲ್ಲಿ ತಟಸ್ಥ ನಿಲುವು ತೆಗೆದುಕೊಂಡಿದೆ. ಪುಟಿನ್ ಜೊತೆ ದೂರವಾಣಿಯಲ್ಲಿ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ಹಿಂಸಾಚಾರ ನಿಲ್ಲಿಸುವಂತೆ ಮಾತುಕತೆ ನಡೆಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.