ರನ್ವೇ ಬಿಟ್ಟು ಬೇರೆಡೆ ಚಲಿಸಿದ ವಿಮಾನವೊಂದರ ವಿಡಿಯೊ ಅನ್ನು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಇದು ಉತ್ತರ ಪ್ರದೇಶದ ಬರೇಲಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದ ಘಟನೆ ಎಂದೂ ಕೆಎಲ್ಎಂ ಏರ್ಲೈನ್ಸ್ಗೆ ಸೇರಿದ ವಿಮಾನವು ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿತು ಎಂದೂ ಪೋಸ್ಟ್ ಅನ್ನು ಹಂಚಿಕೊಳ್ಳುತ್ತಿರುವವರು ಪ್ರತಿಪಾದಿಸುತ್ತಿದ್ದಾರೆ. ಆದರೆ, ಇದು ಸುಳ್ಳು ಸುದ್ದಿ.

ಬರೇಲಿಯಲ್ಲಿ ಇರುವುದು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಅಲ್ಲ; ಅದು ಬರೇಲಿ ವಾಯುಸೇನಾ ನಿಲ್ದಾಣ ಅಥವಾ ತ್ರಿಶೂಲ್ ಏರ್ಬೇಸ್. ಈ ಬಗ್ಗೆ ನಿರ್ದಿಷ್ಟ ಪದಗಳ ಮೂಲಕ ಹುಡುಕಾಟ ನಡೆಸಿದಾಗ, ಬರೇಲಿಯಲ್ಲಿ ಅಂತಹ ಯಾವುದೇ ಘಟನೆ ನಡೆದಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿಲ್ಲ ಎನ್ನುವುದು ಕಂಡುಬಂತು. ವಿಡಿಯೊದ ಕೀಫ್ರೇಮ್ಗಳನ್ನು ರಿವರ್ಸ್ ಇಮೇಜ್ ಸರ್ಚ್ಗೆ ಒಳಪಡಿಸಿದಾಗ, 2024ರ ಡಿ.19ರಂದು ಇಂಥದ್ದೇ ವಿಡಿಯೊ ಅನ್ನು ಫೇಸ್ಬುಕ್ನಲ್ಲಿ ಅಪ್ಲೋಡ್ ಮಾಡಲಾಗಿತ್ತು. ನಾರ್ವೆಯ ಓಸ್ಲೋ ವಿಮಾಣ ನಿಲ್ದಾಣದಲ್ಲಿ ನಡೆದ ಘಟನೆ ಎಂದೂ ಅದರಲ್ಲಿ ಯಾರಿಗೂ ಪ್ರಾಣಾಪಾಯ ಉಂಟಾಗಲಿಲ್ಲ ಎಂದೂ ಅಡಿಟಿಪ್ಪಣಿಯಲ್ಲಿ ಉಲ್ಲೇಖಿಸಲಾಗಿತ್ತು. ಹೊರದೇಶದ ಹಳೆಯ ವಿಡಿಯೊ ಅನ್ನು ಉತ್ತರ ಪ್ರದೇಶದಲ್ಲಿ ನಡೆದದ್ದು ಎಂದು ಹಂಚಿಕೊಳ್ಳಲಾಗುತ್ತಿದೆ ಎಂದು ಪಿಟಿಐ ಫ್ಯಾಕ್ಟ್ ಚೆಕ್ ವರದಿ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.