‘18 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಕೋವಿಡ್-19 ಲಸಿಕೆ ನೀಡುವ ಕಾರ್ಯಕ್ರಮ ಮೇ 1ರಿಂದ ಆರಂಭವಾಗಲಿದೆ. ಆದರೆ ಯುವತಿಯರು ಕೋವಿಡ್ ಲಸಿಕೆ ಪಡೆದುಕೊಳ್ಳುವ ಮೊದಲು ಎಚ್ಚರ ವಹಿಸಬೇಕು. ಋತುಸ್ರಾವಕ್ಕೆ ಐದು ದಿನ ಮೊದಲು ಮತ್ತು ನಂತರದ ಐದು ದಿನದವರೆಗೂ ಲಸಿಕೆ ಹಾಕಿಸಿಕೊಳ್ಳಬಾರದು. ಈ ಅವಧಿಯಲ್ಲಿ ಲಸಿಕೆ ಪಡೆದುಕೊಂಡರೆ, ರಕ್ತಸ್ರಾವವಾಗುವ ಕಾರಣ ಲಸಿಕೆಯಿಂದ ಕೋವಿಡ್ ಪ್ರತಿರೋಧಕ ಶಕ್ತಿ ಅಭಿವೃದ್ಧಿಯಾಗುವುದಿಲ್ಲ’ ಎಂಬ ವಿವರ ಇರುವ ಪೋಸ್ಟ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಕನ್ನಡ ಭಾಷೆಯಲ್ಲಿಯೂ ಇಂತಹ ಪೋಸ್ಟರ್‌ಗಳು ಇವೆ.

ಇದು ಸುಳ್ಳು ಮಾಹಿತಿ ಎಂದು ಹಲವು ಫ್ಯಾಕ್ಟ್‌ಚೆಕ್ ವೇದಿಕೆಗಳು ಹೇಳಿವೆ. ಲಸಿಕೆ ಪಡೆದುಕೊಳ್ಳುವುದರ ಬಗ್ಗೆ ಆರೋಗ್ಯ ಸಚಿವಾಲಯವು ಹೊರಡಿಸಿರುವ ಮಾರ್ಗಸೂಚಿಗಳಲ್ಲಿ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ. ‘ವದಂತಿಗಳಿಗೆ ಕಿವಿಕೊಡಬೇಡಿ. ಋತುಸ್ರಾವದ ಅವಧಿಯಲ್ಲಿ, ಆ ಅವಧಿಯ ಹಿಂದೆ ಅಥವಾ ಮುಂದೆ ಲಸಿಕೆ ಹಾಕಿಸಿಕೊಳ್ಳಬಾರದು ಎಂದು ಎಲ್ಲಿಯೂ ಹೇಳಿಲ್ಲ. 18 ವರ್ಷ ಮೇಲ್ಪಟ್ಟ ಎಲ್ಲರೂ ಕೋವಿಡ್ ಲಸಿಕೆ ಹಾಕಿಸಿಕೊಳ್ಳಬಹುದು. ಹೀಗಾಗಿ ಎಲ್ಲರೂ ಲಸಿಕೆ ಹಾಕಿಸಿಕೊಳ್ಳಿ’ ಎಂದು ಪಿಐಬಿ ಫ್ಯಾಕ್ಟ್‌ಚೆಕ್ ಪ್ರಕಟಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.