ಉಡುಪಿ: ಮಾಜಿ ಪ್ರಧಾನಿ ದಿ. ಇಂದಿರಾ ಗಾಂಧಿ ಅವರ ಕುರಿತ ಸುಳ್ಳು ಸುದ್ದಿಯನ್ನು ತಮ್ಮ ಅಧಿಕೃತ ಫೇಸ್ಬುಕ್ ಖಾತೆಯಲ್ಲಿ ಹಂಚಿಕೊಂಡಿರುವ ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ಅವರ ವಿರುದ್ಧ ಪ್ರಕರಣ ದಾಖಲಿಸಿ ತಕ್ಷಣ ಕ್ರಮ ಕೈಗೊಳ್ಳುವಂತೆ ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಆಗ್ರಹಿಸಿದೆ.

ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ನ ನಿಯೋಗವು ಜಿಲ್ಲಾಧ್ಯಕ್ಷೆ ಜ್ಯೋತಿ ಹೆಬ್ಬಾರ್ ಅವರ ನೇತೃತ್ವದಲ್ಲಿ ಗುರುವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿತು.

ಸಚಿವರಾಗಿ ಕಾರ್ಯನಿರ್ವಹಿಸಿ, ಜವಾಬ್ದಾರಿಯುತ ಸ್ಥಾನದಲ್ಲಿರುವ ಶಾಸಕರು ಇಂತಹ ಸುಳ್ಳು ಸುದ್ದಿಯನ್ನು ಪರೀಶೀಲಿಸದೇ ತಮ್ಮ ಅಧಿಕೃತ ಫೇಸ್ಬುಕ್ ಖಾತೆಯಲ್ಲಿ ಹಂಚಿಕೊಂಡಿರುವುದು ಅಕ್ಷಮ್ಯ ಅಪರಾಧ. ದೇಶಕ್ಕೆ ದಿ. ಇಂದಿರಾ ಗಾಂಧಿ ಅವರ ಕೊಡುಗೆ ಅಪಾರ. ಅಂತಹ ಮೇರು ನಾಯಕಿಯನ್ನು ಅಪಮಾನ ಮಾಡಿರುವುದು ಶಾಸಕರಿಗೆ ಶೋಭೆ ತರುವುದಿಲ್ಲ ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ಪ್ರಮುಖರಾದ ಗೀತಾ ವಾಗ್ಲೆ, ಬಾನು ಭಾಸ್ಕರ್, ಪ್ರತಿಮಾ ರಾಣೆ, ರೆಹಮತ್ ಚರಿತ್ರಾ ಎಂ.,ಪುಷ್ಪ ಅಂಚನ್, ಸಂಧ್ಯಾ ತಿಲಕರಾಜ್ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260515-28-264867884

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.