ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಎನ್‌ಡಿಎಯಿಂದ ಹೊರಬಂದು ಆರ್‌ಜೆಡಿ ಬೆಂಬಲದೊಂದಿಗೆ ಹೊಸ ಸರ್ಕಾರ ರಚಿಸಿದ್ದಾರೆ. ಇದೇ ವೇಳೆ, ನಿತೀಶ್ ಕುಮಾರ್ ಅವರು ವಿಧಾನಸಭೆಯಲ್ಲಿ ಭಾಷಣ ಮಾಡಿದ ವಿಡಿಯೊವೊಂದು ವೈರಲ್ ಆಗಿದೆ. ‘ಇನ್ನು ಮುಂದೆ ಬೆಂಬಲ ಪಡೆಯುವುದಿಲ್ಲ, ಇದೇ ಕೊನೆ. ಮುಂದೆ ಎಂದೂ ಇದು ಸಾಧ್ಯವಾಗುವುದಿಲ್ಲ’ ಎಂದು ನಿತೀಶ್ ಅವರು ವಿಡಿಯೊದಲ್ಲಿ ಹೇಳಿದ್ದಾರೆ. ಈ ವಿಡಿಯೊವನ್ನು ಷೇರ್ ಮಾಡಿರುವ ಬಿಜೆಪಿಯ ಹಲವು ಮುಖಂಡರು ಹಾಗೂ ಪತ್ರಕರ್ತರು, ನಿತೀಶ್ ಅವರು ಆರ್‌ಜೆಡಿಯನ್ನು ಕುರಿತು ಈ ಮಾತುಗಳನ್ನು ಹೇಳಿದ್ದಾರೆ ಎಂದು ಉಲ್ಲೇಖಿಸಿದ್ದಾರೆ.

ವೈರಲ್ ಆಗಿರುವ ವಿಡಿಯೊ ಎಂಟು ವರ್ಷ ಹಳೆಯದು ಎಂದು ಆಲ್ಟ್ ನ್ಯೂಸ್ ಹಾಗೂ ಲಾಜಿಕಲ್ ಇಂಡಿಯನ್ ವೆಬ್‌ಸೈಟ್‌ಗಳು ಫ್ಯಾಕ್ಟ್ ಚೆಕ್ ಪ್ರಕಟಿಸಿವೆ. 2014ರ ಫೆಬ್ರುವರಿ 18ರಂದು ಪ್ರಕಟವಾದ ದೈನಿಕ ಭಾಸ್ಕರ್, ದೈನಿಕ ಜಾಗರಣ್ ಮೊದಲಾದ ಪತ್ರಿಕೆಗಳಲ್ಲಿ ನಿತೀಶ್ ಭಾಷಣದ ವರದಿಗಳಿವೆ. ನಿತೀಶ್ ಅವರು ಬಿಜೆಪಿಯನ್ನು ಕುರಿತು ಈ ಮಾತುಗಳನ್ನು ಹೇಳಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿದ್ದವು. ಆದರೆ, ನಿತೀಶ್ ಅವರು ಆರ್‌ಜೆಡಿ ಜತೆ ಮತ್ತೆ ಕೈಜೋಡಿಸುವುದಿಲ್ಲ ಎಂಬುದಾಗಿ ಹೇಳಿದ್ದಾರೆ ಎಂದು ತಪ್ಪಾಗಿ ಬಿಂಬಿಸಲಾಗಿದೆ ಎಂದು ವೆಬ್‌ಸೈಟ್‌ಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.