ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಲ್ಲಾ ಜಿಲ್ಲೆಗಳಲ್ಲೂ ಸೈಬರ್ ಪೊಲೀಸ್‌ ಠಾಣೆ ತೆರೆದ ಮೊದಲ ರಾಜ್ಯ ಉತ್ತರಪ್ರದೇಶವಲ್ಲ

Published 5 ಮಾರ್ಚ್ 2024, 0:31 IST
Last Updated 5 ಮಾರ್ಚ್ 2024, 0:31 IST
ಅಕ್ಷರ ಗಾತ್ರ

‘ಉತ್ತರ ಪ್ರದೇಶದ ಎಲ್ಲಾ 57 ಜಿಲ್ಲೆಗಳಲ್ಲಿ ಸೈಬರ್‌ ಪೊಲೀಸ್‌ ಠಾಣೆಗಳನ್ನು ಸ್ಥಾಪಿಸಿದ್ದೇವೆ. ರಾಜ್ಯವೊಂದರ ಎಲ್ಲಾ ಜಿಲ್ಲೆಗಳಲ್ಲೂ ಸೈಬರ್‌ ಪೊಲೀಸ್‌ ಠಾಣೆ ಸ್ಥಾಪಿಸಿದ ದೇಶದ ಮೊದಲ ರಾಜ್ಯ ಉತ್ತರ ಪ್ರದೇಶ’ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಹೇಳುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಬಿಜೆಪಿ ಅಧಿಕಾರದಲ್ಲಿ ಇದ್ದರೆ ಇವೆಲ್ಲವೂ ಸಾಧ್ಯ ಎಂದು ಹಲವರು ಆ ವಿಡಿಯೊಗೆ ಪ್ರತಿಕ್ರಿಯೆ ನೀಡಿದ್ದಾರೆ. ಯೋಗಿ ಅವರ ಹೇಳಿಕೆಯನ್ನು ಆಧರಿಸಿ ಹಲವು ಸುದ್ದಿ ಮಾಧ್ಯಮಗಳು ವರದಿ ಪ್ರಕಟಿಸಿವೆ. ಆದರೆ, ಯೋಗಿ ಅವರು ವಿಡಿಯೊದಲ್ಲಿ ನೀಡಿರುವುದು ತಪ್ಪು ಮಾಹಿತಿ.

ದೇಶದಲ್ಲೇ ಮೊದಲ ಸೈಬರ್ ಪೊಲೀಸ್ ಠಾಣೆ ಆರಂಭವಾಗಿದ್ದು ಬೆಂಗಳೂರಿನಲ್ಲಿ (2001). ರಾಜ್ಯವೊಂದರ ಎಲ್ಲಾ ಜಿಲ್ಲೆಗಳಲ್ಲೂ ಸೈಬರ್ ಪೊಲೀಸ್ ಠಾಣೆಗಳನ್ನು ಆರಂಭಿಸಿದ ಮೊದಲ ರಾಜ್ಯ ಮಹಾರಾಷ್ಟ್ರ. ಹರಿಯಾಣದ ಎಲ್ಲಾ ಜಿಲ್ಲೆಗಳಲ್ಲೂ ಸೈಬರ್ ಪೊಲೀಸ್‌ ಠಾಣೆಗಳಿವೆ. ಬಿಹಾರ ಸರ್ಕಾರವು 2023ರಲ್ಲಿ ತನ್ನೆಲ್ಲಾ ಜಿಲ್ಲೆಗಳಲ್ಲಿ ಸೈಬರ್ ಪೊಲೀಸ್‌ ಠಾಣೆಗಳನ್ನು ಸ್ಥಾಪಿಸಿತ್ತು. ಆ ರಾಜ್ಯಗಳ ಸಾಲಿಗೆ ಉತ್ತರ ಪ್ರದೇಶವು ಈಗ ಸೇರಿದೆಯಷ್ಟೆ. ಹೀಗಾಗಿ ಎಲ್ಲಾ ಜಿಲ್ಲೆಗಳಲ್ಲೂ ಸೈಬರ್ ಪೊಲೀಸ್ ಠಾಣೆ ಸ್ಥಾಪಿಸಿದ ಮೊದಲ ರಾಜ್ಯ ಉತ್ತರ ಪ್ರದೇಶ ಎಂದು ಯೋಗಿ ಅವರು ಹೇಳಿರುವುದು ಸುಳ್ಳು ಮಾಹಿತಿ ಎಂದು ಆಲ್ಟ್‌ನ್ಯೂಸ್‌ ಫ್ಯಾಕ್ಟ್‌ಚೆಕ್‌ ಪ್ರಕಟಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT