ಕತಾರ್‌ನಲ್ಲಿ ನಡೆಯುತ್ತಿರುವ ಫಿಫಾ ವಿಶ್ವಕಪ್ ಟೂರ್ನಿನಲ್ಲಿ ಬಲಿಷ್ಠ ಅರ್ಜೆಂಟೀನಾ ತಂಡವನ್ನು ಸೋಲಿಸಿದ ಸೌದಿ ಅರೇಬಿಯಾ ತಂಡಕ್ಕೆ ಭಾರಿ ಪ್ರಶಂಸೆ ವ್ಯಕ್ತವಾಗಿದೆ. ಅಪೂರ್ವ ಗೆಲುವು ತಂದಿತ್ತ ತಂಡದ ಪ್ರತಿಯೊಬ್ಬ ಸದಸ್ಯನಿಗೆ ದುಬಾರಿ ರೋಲ್ಸ್ ರಾಯ್ಸ್ ಕಾರನ್ನು ಉಡುಗೊರೆಯಾಗಿ ನೀಡಲು ಸೌದಿ ದೊರೆ ಸಲ್ಮಾನ್ ಅವರು ನಿರ್ಧರಿಸಿದ್ದಾರೆ ಎಂದು ಹಲವು ಮಾಧ್ಯಮಗಳು ವರದಿ ಮಾಡಿವೆ. ಅಂತರರಾಷ್ಟ್ರೀಯ ಹಾಗೂ ರಾಷ್ಟ್ರೀಯ ಮಾಧ್ಯಮಗಳಲ್ಲಿ ಈ ವರದಿ ಪ್ರಕಟವಾಗಿದೆ. ಆದರೆ ಇದು ಸತ್ಯಕ್ಕೆ ದೂರವಾದುದು.