ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Fact Check | 153 ದೇಶಗಳ ಅಧ್ಯಕ್ಷರನ್ನಾಗಿ ಪ್ರಧಾನಿ ಮೋದಿ ಆಯ್ಕೆ?

Last Updated 25 ಜೂನ್ 2021, 19:45 IST
ಅಕ್ಷರ ಗಾತ್ರ

‘ಪ್ರಧಾನಿ ನರೇಂದ್ರ ಮೋದಿ ಅವರನ್ನು 153 ದೇಶಗಳ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ. ಮೋದಿ ವಿರೋಧಿಗಳು ಇದನ್ನು ಗಮನಿಸುವುದೇ ಇಲ್ಲ. ಆದರೆ ಮೋದಿ ಅಭಿಮಾನಿಗಳು ಈ ವಿಡಿಯೊವನ್ನು ಹಂಚಿಕೊಳ್ಳದೇ ಇರುವುದಿಲ್ಲ’ ಎಂಬ ವಿವರ ಇರುವ ಪೋಸ್ಟ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಮೋದಿ ಮತ್ತು ಡೊನಾಲ್ಡ್ ಟ್ರಂಪ್‌ ಅವರು ವೇದಿಕೆಯೊಂದರಲ್ಲಿ ಇರುವ ವಿಡಿಯೊವನ್ನು ಹಂಚಿಕೊಳ್ಳಲಾಗಿದೆ.

‘2015ರಲ್ಲಿ ನರೇಂದ್ರ ಮೋದಿ ಅವರು ಕ್ಯಾಲಿಫೋರ್ನಿಯಾದಲ್ಲಿ ಅನಿವಾಸಿ ಭಾರತೀಯರ ಜತೆ ನಡೆಸಿದ ಸಂವಾದದ ವಿಡಿಯೊವನ್ನು ತಪ್ಪಾಗಿ ಹಂಚಿಕೊಳ್ಳಲಾಗಿದೆ. 153 ದೇಶಗಳ ಅಧ್ಯಕ್ಷ ಅಥವಾ ಮುಖ್ಯಸ್ಥನ ಹುದ್ದೆ ಎಂಬುದೇ ಅಸ್ತಿತ್ವದಲ್ಲಿ ಇಲ್ಲ.

ಮೋದಿ ಅವರನ್ನು 153 ದೇಶಗಳ ಮುಖ್ಯಸ್ಥನಾಗಿ ಆಯ್ಕೆ ಮಾಡಲಾಗಿದೆ ಎಂಬುದು ಸುಳ್ಳು ಸುದ್ದಿ’ ಎಂದು ದಿ ಲಾಜಿಕಲ್ ಇಂಡಿಯನ್ ಫ್ಯಾಕ್ಟ್‌ಚೆಕ್ ಪ್ರಕಟಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT