ಭದ್ರತಾ ಸಿಬ್ಬಂದಿ ಹಲವು ಜನರಿಗೆ ಥಳಿಸುತ್ತಿರುವ ವಿಡಿಯೊ ತುಣಕೊಂದನ್ನು ಪ್ರಭಾಕರ್ ಸಿಂಗ್ ಪರಿಹಾರ್ ಎಂಬ ಎಕ್ಸ್ ಬಳಕೆದಾರ ಪೋಸ್ಟ್ ಮಾಡಿದ್ದು, ಇದು ಪಶ್ಚಿಮ ಬಂಗಾಳದಲ್ಲಿ ನಡೆದ ಘಟನೆ ಎಂದೂ, ಚುನಾವಣೆಗೂ ಮುಂಚಿತವಾಗಿ ಸಿಆರ್ಪಿಎಫ್ ಸಿಬ್ಬಂದಿ ಗೂಂಡಾಗಳ ವಿರುದ್ಧ ಕ್ರಮಕೈಗೊಳ್ಳುತ್ತಿದ್ದಾರೆ ಎಂದೂ ಪ್ರತಿಪಾದಿಸಲಾಗುತ್ತಿದೆ. ‘ಸಿಆರ್ಪಿಎಫ್ನ ಪ್ರವೇಶದೊಂದಿಗೆ ಪಶ್ಚಿಮ ಬಂಗಾಳದಲ್ಲಿ ವಾತಾವರಣ ಬದಲಾಗಿದೆ. ಅವಿತು ಕುಳಿತಿರುವ ಗೂಂಡಾಗಳನ್ನು ಪತ್ತೆ ಮಾಡಲಾಗುತ್ತಿದೆ. ಇನ್ನು ಮುಂದೆ ಮಾತುಕತೆಯ ಪ್ರಶ್ನೆಯೇ ಇಲ್ಲ. ನೇರವಾಗಿ ಕ್ರಮ ಕೈಗೊಳ್ಳಲಾಗುತ್ತಿದೆ. ಬಂಗಾಳದಲ್ಲಿ ಇನ್ನು ಹಿಂದೂಗಳ ಆಡಳಿತ ಮಾತ್ರ ಇರಲಿದೆ’ ಎಂದು ಪೋಸ್ಟ್ನಲ್ಲಿ ಹೇಳಲಾಗಿದೆ. ಆದರೆ, ಇದು ಸುಳ್ಳು.

ವಿಡಿಯೊ ತುಣುಕಿನ ಕೀಫ್ರೇಮ್ ಅನ್ನು ಗೂಗಲ್ ಲೆನ್ಸ್ ಬಳಸಿಕೊಂಡು ಹುಡುಕಾಡಿದಾಗ, ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ಇದೇ ಪ್ರತಿಪಾದನೆಯೊಂದಿಗೆ ವಿಡಿಯೊವನ್ನು ಹಂಚಿಕೊಂಡಿರುವುದು ಕಂಡು ಬಂತು. ಇನ್ನಷ್ಟು ಹುಡುಕಾಟ ನಡೆಸಿದಾಗ ಇದೇ ವಿಡಿಯೊವನ್ನು ಬಾಂಗ್ಲಾದೇಶದ ಡಿಬಿಸಿ ನ್ಯೂಸ್ ಸುದ್ದಿ ವಾಹಿನಿಯು ತನ್ನ ಫೇಸ್ಬುಕ್ ಪುಟದಲ್ಲಿ ಈ ವರ್ಷದ ಜನವರಿಯಲ್ಲಿ ಹಂಚಿಕೊಂಡ ಪೋಸ್ಟ್ ಸಿಕ್ಕಿತು. ಅದರಲ್ಲಿನ ವಿವರಗಳನ್ನು ಕೂಲಂಕಷವಾಗಿ ಪರಿಶೀಲಿಸಿದಾಗ, ಅದು ಬಾಂಗ್ಲಾದೇಶದಲ್ಲಿ ನಡೆದ ಘಟನೆಯ ವಿಡಿಯೊ ಎಂಬುದು ದೃಢಪಟ್ಟಿತು. ಬಾಂಗ್ಲಾದ ಪಂಚಗಢ ಜಿಲ್ಲೆಯ ಯುವ ಮುಖಂಡ ಉಸ್ಮಾನ್ ಹಾದಿ ಹತ್ಯೆಯನ್ನು ಖಂಡಿಸಿ ಜನರು ನಡೆಸಿದ ಪ್ರತಿಭಟನೆಯ ವೇಳೆ ಅಲ್ಲಿನ ಸೇನಾ ಸಿಬ್ಬಂದಿ ಬಲವಂತವಾಗಿ ಪ್ರತಿಭಟನೆಯನ್ನು ಹತ್ತಿಕ್ಕಲು ಯತ್ನಿಸಿದ್ದರು. ಇದರ ಆಧಾರದಲ್ಲಿ ನಿರ್ದಿಷ್ಟ ಪದಗಳನ್ನು ಬಳಸಿ ಗೂಗಲ್ನಲ್ಲಿ ಹುಡುಕಿದಾಗ, ಈ ಘಟನೆಯ ಬಗ್ಗೆ ಹಲವು ಮಾಧ್ಯಮಗಳು ಮಾಡಿರುವ ವರದಿಗಳು ಸಿಕ್ಕಿದವು. ಬಾಂಗ್ಲಾದೇಶದಲ್ಲಿ ನಡೆದ ಘಟನೆಯ ವಿಡಿಯೊವನ್ನು ಈಗ ಪಶ್ಚಿಮ ಬಂಗಾಳದಲ್ಲಿ ನಡೆದಿದೆ ಎಂದು ತಪ್ಪು ಮಾಹಿತಿಯೊಂದಿಗೆ ಹಂಚಿಕೊಳ್ಳಲಾಗುತ್ತಿದೆ ಎಂದು ಪಿಟಿಐ ಫ್ಯಾಕ್ಟ್ ಚೆಕ್ ವರದಿ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.