ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬಿಹಾರ | ಚುನಾವಣೆ ಬಳಿಕ ‌ಹಿಂಸಾಚಾರ: ಓರ್ವ ಸಾವು, ಮೂವರಿಗೆ ಗಾಯ

Published 21 ಮೇ 2024, 9:57 IST
Last Updated 21 ಮೇ 2024, 9:57 IST
ಅಕ್ಷರ ಗಾತ್ರ

ಸರನ್: ಬಿಹಾರದ ಸರನ್ ಲೋಕಸಭಾ ಕ್ಷೇತ್ರದಲ್ಲಿ ಸೋಮವಾರ ನಡೆದ 5ನೇ ಹಂತದ ಮತದಾನದ ಬಳಿಕ ಹಿಂಸಾಚಾರ ನಡೆದಿದೆ. ಘಟನೆಯಲ್ಲಿ ಒಬ್ಬ ಮೃತಪಟ್ಟು, ಮೂವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಭಿಖಾರಿ ಠಾಕೂರ್ ಚೌಕ್ ಬಳಿಯ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಈ ಪ್ರದೇಶದಲ್ಲಿ ಸೋಮವಾರ ನಡೆದ ಮತದಾನದ ವೇಳೆ ಬಿಜೆಪಿ ಮತ್ತು ಆರ್‌ಜೆಡಿ ಬೆಂಬಲಿಗರು ಎನ್ನಲಾದ ಎರಡು ಗುಂಪುಗಳ ನಡುವೆ ವಾಗ್ವಾದ ನಡೆದಿದ್ದು, ಈ ನಡುವೆ ಗುಂಡಿನ ದಾಳಿ ನಡೆದಿದೆ. ದಾಳಿಯಲ್ಲಿ ಓರ್ವ ಸ್ಥಳದಲ್ಲೇ ಸಾವಿಗೀಡಾಗಿದ್ದು, ಮೂವರು ಗಾಯಗೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮೃತನನ್ನು ಚಂದನ್ ಯಾದವ್ (25) ಎಂದು ಗುರುತಿಸಲಾಗಿದೆ.

ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಳಿಕ ಅವರಲ್ಲಿ ಇಬ್ಬರನ್ನು ಹೆಚ್ಚಿನ ಚಿಕಿತ್ಸೆಗಾಗಿ ಪಟ್ನಾಕ್ಕೆ ಕಳುಹಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಗೌರವ್ ಮಂಗಳಾ ತಿಳಿಸಿದ್ದಾರೆ.

ಮೂವರ ಬಂಧನ, ಇಂಟರ್ನೆಟ್ ಸ್ಥಗಿತ:

ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ. ಘಟನೆಗೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ. ಅಲ್ಲದೇ ಹಿಂಸಾಚಾರವನ್ನು ತಡೆಯಲು ಜಿಲ್ಲೆಯಲ್ಲಿ ಇಂಟರ್ನೆಟ್ ಸಹ ಸ್ಥಗಿತಗೊಳಿಸಲಾಗಿದೆ ಎಂದೂ ಅವರು ತಿಳಿಸಿದ್ದಾರೆ.

ಸರನ್‌ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಸಂಸದ ರಾಜೀವ್ ಪ್ರತಾಪ್ ರೂಡಿ ವಿರುದ್ಧ ಮಹಾಘಟಬಂಧನ್ ಅಭ್ಯರ್ಥಿಯಾಗಿ ಆರ್‌ಜೆಡಿ ಅಧ್ಯಕ್ಷ ಲಾಲು ಪ್ರಸಾದ್ ಅವರ ಪುತ್ರಿ ರೋಹಿಣಿ ಆಚಾರ್ಯ ಸ್ಪರ್ಧಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT