ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಮಣಿಪುರ ವಿಶ್ವವಿದ್ಯಾಲಯದಲ್ಲಿ ಸ್ಫೋಟ: ವ್ಯಕ್ತಿ ಸಾವು

Published 24 ಫೆಬ್ರುವರಿ 2024, 3:24 IST
Last Updated 24 ಫೆಬ್ರುವರಿ 2024, 3:24 IST
ಅಕ್ಷರ ಗಾತ್ರ

ಇಂಫಾಲ್‌: ಇಲ್ಲಿನ ಮಣಿಪುರ ವಿಶ್ವವಿದ್ಯಾಲಯದಲ್ಲಿ ಭಾರೀ ಸ್ಫೋಟ ಸಂಭವಿಸಿದ್ದು ಒಬ್ಬರು ಮೃತಪಟ್ಟು ಮತ್ತೊಬ್ಬರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಶುಕ್ರವಾರ ಸಂಜೆ ವಿಶ್ವವಿದ್ಯಾಲಯದ ಆವರಣದೊಳಗೆ ಸ್ಫೋಟ ಸಂಭವಿಸಿದೆ ಎಂದು ವರದಿಯಾಗಿದೆ. ಸ್ಫೋಟಕ್ಕೆ ಐಇಡಿ (ಸುಧಾರಿತ ಸ್ಫೋಟಕಗಳು) ಸಾಮಗ್ರಿ ಬಳಕೆ ಮಾಡಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಗಾಯಗೊಂಡವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇವರಲ್ಲಿ ಒಬ್ಬರು ತೀವ್ರವಾಗಿ ಗಾಯಗೊಂಡಿದ್ದರಿಂದ ಆಸ್ಪತ್ರೆಯಲ್ಲಿ ಮೃತಪಟ್ಟರು. ಮತ್ತೊಬ್ಬ ವ್ಯಕ್ತಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT