ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‍ಪುಣೆ: 10 ಅಡುಗೆ ಅನಿಲ ಸಿಲಿಂಡರ್‌ಗಳ ಸ್ಫೋಟ– ಯಾವುದೇ ಜೀವ ಹಾನಿ ಇಲ್ಲ

Published 27 ಡಿಸೆಂಬರ್ 2023, 12:56 IST
Last Updated 27 ಡಿಸೆಂಬರ್ 2023, 12:56 IST
ಅಕ್ಷರ ಗಾತ್ರ

ಪುಣೆ: ಮಹಾರಾಷ್ಟ್ರದ ಪುಣೆಯಲ್ಲಿ ಬುಧವಾರ ಸುಮಾರು 10 ಅಡುಗೆ ಅನಿಲ ಸಿಲಿಂಡರ್‌ಗಳು ಸ್ಫೋಟಗೊಂಡಿದ್ದು, ಯಾವುದೇ ಜೀವ ಹಾನಿಯಾಗಿಲ್ಲ ಎಂದು ಅಗ್ನಿ ಶಾಮಕ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪುಣೆಯ ವಿಮನ್‌ ನಗರ ಪ್ರದೇಶದಲ್ಲಿ ಮಧ್ಯಾಹ್ನ 2.45 ರಿಂದ 3.00 ಗಂಟೆ ನಡುವೆ ಘಟನೆ ಸಂಭವಿಸಿದೆ ಎಂದು ಅವರು ತಿಳಿಸಿದ್ದಾರೆ.

ಸಿಲಿಂಡರ್‌ಗಳ ಸ್ಫೋಟಕ್ಕೆ ಕಾರಣವೇನು ಎನ್ನುವುದರ ಬಗ್ಗೆ ಅಧಿಕಾರಿಗಳು ಯಾವುದೇ ಮಾಹಿತಿ ನೀಡಿಲ್ಲ.

ಸುಮಾರು 100 ಸಿಲಿಂಡರ್‌ಗಳನ್ನು ಕಟ್ಟಡ ಕಾರ್ಮಿಕರ ಗುಡಿಸಲುಗಳ ಬಳಿ ತೆರೆದ ಜಾಗದಲ್ಲಿ ಇರಿಸಲಾಗಿತ್ತು ಎಂದು ಅಧಿಕಾರಿ ತಿಳಿಸಿದ್ದಾರೆ.

ಬೆಂಕಿ ನಂದಿಸಲು ಮೂರು ಅಗ್ನಿಶಾಮಕ ವಾಹನ ಹಾಗೂ ನೀರಿನ ಟ್ಯಾಂಕರ್‌ಗಳನ್ನು ಸ್ಥಳಕ್ಕೆ ಕಳುಹಿಸಿಕೊಡಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಸ್ಥಳದಲ್ಲಿದ್ದ ಉಳಿದ ಸಿಲಿಂಡರ್‌ಗಳನ್ನು ತೆರವುಗೊಳಿಸಿ, ಹೆಚ್ಚಿನ ಹಾನಿ ತಡೆಯಲು ನೀರು ಸಿಂಪಡಿಸಲಾಗಿದೆ ಎಂದು ಪುಣೆ ಮುನ್ಸಿಪಲ್ ಕಾರ್ಪೊರೇಷನ್‌ನ ಅಗ್ನಿಶಾಮಕ ದಳದ ಮುಖ್ಯಸ್ಥ ದೇವೇಂದ್ರ ಪೊಟ್‌ಫೋಡೆ ತಿಳಿಸಿದ್ದಾರೆ.

ಪ್ರಕರಣದಲ್ಲಿ ಯಾರಿಗೂ ಗಾಯವಾಗಿಲ್ಲ ಎಂದಿರುವ ಅವರು, ಘಟನೆ ಸಂಭವಿಸಲು ಕಾರಣ ಏನು ಎನ್ನುವುದನ್ನು ತಿಳಿಯಲು ತನಿಖೆ ನಡೆಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT