ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಗಾರ್ಬಾ’ ನೃತ್ಯ ಪ್ರದರ್ಶನ ವೇಳೆ ಹೃದಯಾಘಾತ: 10 ಮಂದಿ ಸಾವು

Published 22 ಅಕ್ಟೋಬರ್ 2023, 19:15 IST
Last Updated 22 ಅಕ್ಟೋಬರ್ 2023, 19:15 IST
ಅಕ್ಷರ ಗಾತ್ರ

ಗಾಂಧಿನಗರ: ಗುಜರಾತ್‌ನಲ್ಲಿ  ನವರಾತ್ರಿ ಸಂಭ್ರಮಾಚರಣೆ ಅಂಗವಾಗಿ ಗಾರ್ಬಾ ನೃತ್ಯ ಪ್ರದರ್ಶಿಸುವ ವೇಳೆ 10 ಮಂದಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಭಾನುವಾರ ರಾತ್ರಿ 8ಕ್ಕೆ ಕೊನೆಗೊಂಡ ಹಿಂದಿನ 24 ಗಂಟೆಗಳ ಅವಧಿಯಲ್ಲಿ ಈ ಸಾವು ಸಂಭವಿಸಿವೆ. ಮೃತಪಟ್ಟವರಲ್ಲಿ ಬಾಲಕರಿಂದ ಹಿಡಿದು ಮಧ್ಯ ವಯಸ್ಸಿನ ಜನರು ಇದ್ದಾರೆ. ಅಹಮದಾಬಾದ್‌, ನವಸಾರಿ ಮತ್ತು ರಾಜ್‌ಕೋಟ್‌ನಲ್ಲಿ ಸಾವಿನ ಪ್ರಕರಣಗಳು ವರದಿಯಾಗಿವೆ.

ಖೇಡಾ ಜಿಲ್ಲೆಯ ಕಪದ್ವಂಜ್ ನಗರದಲ್ಲಿ ಗಾರ್ಬಾ ನೃತ್ಯ ಪ್ರದರ್ಶಿಸುತ್ತಿದ್ದ ವೇಳೆ 17 ವರ್ಷದ ವೀರ್‌ ಶಾ ಎಂಬಾತ ದಿಢೀರ್‌ ಕುಸಿದುಬಿದ್ದಿದ್ದಾರೆ. ಆತನ ಮೂಗಿನಲ್ಲಿ ರಕ್ತಸ್ರಾವವಾಗಿದ್ದು, ಕೂಡಲೇ ಆಸ್ಪತ್ರೆಗೆ ಕರೆಯೊಯ್ಯಲಾಗಿದೆ. ತಪಾಸಣೆ ನಡೆಸಿದ ವೈದ್ಯರು ಆತ ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

ಬಾಲಕ ಸಾವು: ವಡೋದರ ಜಿಲ್ಲೆಯ ದಭೋಯಿಯಲ್ಲಿ 13 ವರ್ಷದ ಬಾಲಕ ಹೃದಯಾಘಾತದಿಂದ ಮೃತಪಟ್ಟಿರುವುದು ವರದಿಯಾಗಿದೆ.

ಗಾರ್ಬಾ ನೃತ್ಯ ಮುಗಿಸಿಕೊಂಡು ಬೈಸಿಕಲ್‌ನಲ್ಲಿ ಮನೆಗೆ ಮರಳುತ್ತಿದ್ದಾಗ ಬಾಲಕ ಕೆಳಗೆ ಬಿದ್ದು ಗಾಯಗೊಂಡಿದ್ದ. ಆತನನ್ನು ಆಸ್ಪತ್ರೆಗೆ ಕರೆದೊಯ್ದಿದ್ದ ಪೋಷಕರು ಚಿಕಿತ್ಸೆ ಕೊಡಿಸಿ ಮನೆಗೆ ಕರೆತಂದಿದ್ದರು. ಬಳಿಕ ಆತನಿಗೆ ಔಷಧ ನೀಡಿದ್ದರು. ಮಲಗಿದ್ದ ಬಾಲಕ ಹಲವು ಗಂಟೆಗಳು ಕಳೆದರೂ ಎಚ್ಚರಗೊಂಡಿರಲಿಲ್ಲ. ಆತನನ್ನು ಮತ್ತೆ ಆಸ್ಪತ್ರೆಗೆ ಕರೆದೊಯ್ದ ವೇಳೆ ತಪಾಸಣೆ ನಡೆಸಿದ ವೈದ್ಯರು ಹೃದಯಾಘಾತದಿಂದ ಮೃತಪಟ್ಟಿದ್ದಾನೆ ಎಂದು ತಿಳಿಸಿದ್ದಾರೆ.

24 ಗಂಟೆಗಳ ಅವಧಿಯಲ್ಲಿ 500ಕ್ಕೂ ಹೆಚ್ಚು ತುರ್ತುಕರೆ ಸ್ವೀಕರಿಸಲಾಗಿದೆ. ಹಾಗಾಗಿ, ನೃತ್ಯ ಸಂಘಟಕರು ಕಾರ್ಯಕ್ರಮ ನಡೆಯುವ ಸ್ಥಳಗಳಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಕೈಗೊಳ್ಳಬೇಕಿದೆ. ಅಸ್ವಸ್ಥಗೊಂಡವರನ್ನು ಆಸ್ಪತ್ರೆಗೆ ಕರೆದೊಯ್ಯಲು ಆಂಬುಲೆನ್ಸ್‌ ವಾಹನದ ವ್ಯವಸ್ಥೆಯನ್ನೂ ಕೈಗೊಳ್ಳಬೇಕಿದೆ ಎಂದು ಸರ್ಕಾರ ಸೂಚಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT