ಶುಕ್ರವಾರ, 24 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಜರಾತ್: ಟ್ರಕ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಕಾರು; 10 ಮಂದಿ ಸಾವು

Published 17 ಏಪ್ರಿಲ್ 2024, 13:10 IST
Last Updated 17 ಏಪ್ರಿಲ್ 2024, 13:10 IST
ಅಕ್ಷರ ಗಾತ್ರ

ನಾಡಿಯಾಡ್(ಗುಜರಾತ್): ವೇಗವಾಗಿ ಚಲಿಸುತ್ತಿದ್ದ ಕಾರು ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ 10 ಮಂದಿ ಮೃತಪಟ್ಟಿರುವ ಘಟನೆ ಗುಜರಾತ್‌ನ ಖೇಡಾ ಜಿಲ್ಲೆಯ ನಾಡಿಯಾಡ್ ನಗರದ ಬಳಿ ಅಹಮದಾಬಾದ್–ವಡೋದರ ಎಕ್ಸ್‌ಪ್ರೆಸ್ ವೇನಲ್ಲಿ ನಡೆದಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

‘ವಡೋದರದಿಂದ ಅಹಮದಾಬಾದ್‌ ಕಡೆಗೆ ತೆರಳುತ್ತಿದ್ದ ಕಾರು ಹಿಂಬದಿಯಿಂದ ಟ್ರಕ್‌ಗೆ ಡಿಕ್ಕಿ ಹೊಡೆದಿದೆ. 8 ಮಂದಿ ಸ್ಥಳದಲ್ಲೇ ಮೃತಪಟ್ಟರೆ, ಇಬ್ಬರು ಆಸ್ಪತ್ರೆಯಲ್ಲಿ ಅಸುನೀಗಿದ್ದಾರೆ’ ಎಂದು ನಾಡಿಯಾಡ್ ಗ್ರಾಮೀಣ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಕಿರಿಟ್ ಚೌಧರಿ ತಿಳಿಸಿದ್ದಾರೆ.

ತಾಂತ್ರಿಕ ದೋಷದಿಂದ ಟ್ರಕ್ ಅನ್ನು ಹೆದ್ದಾರಿಯ ಎಡಬದಿಯಲ್ಲಿ ನಿಲ್ಲಿಸಿದ್ದು, ಆಗ ಕಾರಿನ ಚಾಲಕನಿಗೆ ಬ್ರೇಕ್ ಹಾಕಲು ಹೆಚ್ಚು ಸಮಯ ಸಿಗದಿದ್ದರಿಂದ ಟ್ರಕ್‌ಗೆ ಗುದ್ದಿರುವ ಸಾಧ್ಯತೆ ಇದೆ ಎಂದು ನಾಡಿಯಾಡ್ ಶಾಸಕ ಪಂಕಜ್ ದೇಸಾಯಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT