ಶುಕ್ರವಾರ, 4 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಹೈದರಾಬಾದ್ | ನವಜಾತ ಶಿಶು ಮಾರಾಟಕ್ಕೆ ಮುಂದಾದ ಪೋಷಕರು: 10 ಮಂದಿ ಬಂಧನ

Published : 24 ಸೆಪ್ಟೆಂಬರ್ 2024, 5:48 IST
Last Updated : 24 ಸೆಪ್ಟೆಂಬರ್ 2024, 5:48 IST
ಫಾಲೋ ಮಾಡಿ
Comments

ಹೈದರಾಬಾದ್: ನವಜಾತ ಶಿಶುವನ್ನು ಮಾರಾಟ ಮಾಡಲು ಯತ್ನಿಸಿದ ಆರೋಪದಡಿ ಪೋಷಕರು ಸೇರಿದಂತೆ 10 ಜನರನ್ನು ಬಂಧಿಸಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನವಜಾತ ಶಿಶುವನ್ನು ₹2.5 ಲಕ್ಷಕ್ಕೆ ಮಾರಾಟ ಮಾಡಲು ಯತ್ನಿಸಿದ್ದ ಪೋಷಕರು ಸೇರಿದಂತೆ ಎಲ್ಲಾ ಆರೋಪಿಗಳನ್ನು ಬಂಧಿಸಲಾಗಿದೆ. ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದ್ದ ಪೋಷಕರು 15 ದಿನದ ಶಿಶಿವನ್ನು ಮಾರಾಟ ಮಾಡಲು ಮಧ್ಯವರ್ತಿಗಳ ಸಹಾಯ ಪಡೆದಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಆ್ಯಪ್‌ವೊಂದರ ಮೂಲಕ ಶಿಶುವನ್ನು ಮಾರಾಟ ಮಾಡಲು ಯತ್ನಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಕ್ಷಿಣ ವಲಯದ ಕಮಿಷನರ್ ಟಾಸ್ಕ್ ಫೋರ್ಸ್ ಪೊಲೀಸರು ಕಾರ್ಯಾಚರಣೆ ನಡೆಸಿ, ಆರೋಪಿಗಳನ್ನು ಬಂಧಿಸಿದ್ದಾರೆ.

ಶಿಶುವನ್ನು ರಕ್ಷಿಸಿ ಮಕ್ಕಳ ಕಲ್ಯಾಣ ಕೇಂದ್ರಕ್ಕೆ ಹಸ್ತಾಂತರಿಸಿದ್ದಾರೆ. ಭಾರತೀಯ ನ್ಯಾಯ ಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ನಡೆಸಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT