ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಿಮಾಚಲ ಪ್ರದೇಶ: ಮಂಡಿ ಅಣೆಕಟ್ಟಿನಲ್ಲಿ ಸಿಲುಕಿದ್ದ 10 ಜನರ ರಕ್ಷಣೆ

Published 21 ಆಗಸ್ಟ್ 2023, 5:17 IST
Last Updated 21 ಆಗಸ್ಟ್ 2023, 5:17 IST
ಅಕ್ಷರ ಗಾತ್ರ

ಶಿಮ್ಲಾ:  ಹಿಮಾಚಲ ಪ್ರದೇಶದ ಮಂಡಿ ಜಿಲ್ಲೆಯ ಕೋಲ್ ಅಣೆಕಟ್ಟು ಜಲವಿದ್ಯುತ್ ಯೋಜನಾಸ್ಥಳದಲ್ಲಿ ಭಾನುವಾರ ಸಂಜೆ ಸಿಲುಕಿದ್ದ ಹತ್ತು ಜನರನ್ನು ಸೋಮವಾರ ಬೆಳಗಿನ ಜಾವ 3ರ ಹೊತ್ತಿಗೆ ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ನೀರಿನ ಮಟ್ಟ ಹಠಾತ್ ಏರಿಕೆಯಾಗಿದೆ. ಪರಿಣಾಮ ಅಧಿಕಾರಿಗಳಿದ್ದ ದೋಣಿ ಅಣೆಕಟ್ಟಿನಲ್ಲಿ ಸಿಲುಕಿತ್ತು. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ಮತ್ತು ಸ್ಥಳೀಯ ಆಡಳಿತ ತಂಡಗಳು ಕಾರ್ಯಾಚರಣೆ ನಡೆಸಿ ಅವರನ್ನು ರಕ್ಷಿಸಿವೆ ಎಂದು ಮಂಡಿಯ ಉಪ ಆಯುಕ್ತ ಅರಿಂದಮ್ ಚೌಧರಿ ತಿಳಿಸಿದ್ದಾರೆ.

ಕಳೆದ ಕೆಲವು ದಿನಗಳಿಂದ ಹಿಮಾಚಲ ಪ್ರದೇಶದಾದ್ಯಂತ ಎಡಬಿಡದೆ ಮಳೆ ಸುರಿಯುತ್ತಿದ್ದು ಮಳೆ ಸಂಬಂಧಿ ಅವಘಡಗಳು ಸಂಭವಿಸುತ್ತಲೇ ಇವೆ. 

ಸೋಮವಾರವೂ ಮಳೆ ಮುಂದುವರೆಯುವ ಸಾಧ್ಯತೆ ಇರುವ ಕಾರಣ ಭಾರತೀಯ ಹವಾಮಾನ ಇಲಾಖೆ (IMD)  ಯೆಲ್ಲೋ ಅಲರ್ಟ್‌ ಘೋಷಣೆ ಮಾಡಿದೆ.

ಅಲ್ಲದೆ ಆಗಸ್ಟ್ 22 ರಿಂದ ಆಗಸ್ಟ್ 24 ರವರೆಗೆ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಿದೆ. ಜತೆಗೆ ಚಂಬಾ ಮತ್ತು ಮಂಡಿ ಜಿಲ್ಲೆಗಳ ಜಲಾನಯನ ಪ್ರದೇಶಗಳಲ್ಲಿ ಹಠಾತ್ ಪ್ರವಾಹ ಉಂಟಾಗುವ ಅಪಾಯದ ಬಗ್ಗೆ ಇಲಾಖೆ ಎಚ್ಚರಿಕೆ ನೀಡಿದೆ. 

 ಇದನ್ನೂ ಓದಿ: ಹಿಮಾಚಲ ಪ್ರದೇಶದ ಮಂಡಿ ಅಣೆಕಟ್ಟಿನಲ್ಲಿ ಸಿಲುಕಿದ 10 ಮಂದಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT