ನವದೆಹಲಿ: ದೇಶದಲ್ಲಿ ಒಂದೇ ದಿನ 85,362 ಹೊಸ ಕೋವಿಡ್–19 ಪ್ರಕರಣಗಳು ವರದಿಯಾಗಿವೆ. ಈ ಪೈಕಿ 10 ರಾಜ್ಯಗಳ ಪಾಲು ಶೇ 75ರಷ್ಟು ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ಹೇಳಿದೆ.

ಮಹಾರಾಷ್ಟ್ರ, ಆಂಧ್ರಪ್ರದೇಶ, ಕರ್ನಾಟಕ, ಕೇರಳ, ತಮಿಳುನಾಡು, ಉತ್ತರ ಪ್ರದೇಶ, ಒಡಿಶಾ, ದೆಹಲಿ, ಪಶ್ಚಿಮ ಬಂಗಾಳ ಹಾಗೂ ಛತ್ತೀಸಗಡದಲ್ಲಿ ಈಗ ಶೇ 75ರಷ್ಟು ಪ್ರಕರಣಗಳು ವರದಿಯಾಗಿವೆ.

ಇನ್ನೊಂದೆಡೆ, ಕೋವಿಡ್ ಪತ್ತೆಗಾಗಿ ಈವರೆಗೆ 7 ಕೋಟಿ ಪರೀಕ್ಷೆಗಳನ್ನು ನಡೆಸಲಾಗಿದೆ. ಪ್ರತಿದಿನ ನಡೆಸುವ ಪರೀಕ್ಷೆಗಳ ಸಂಖ್ಯೆ 14 ಲಕ್ಷ ದಾಟಿದೆ ಎಂದೂ ಸಚಿವಾಲಯ ಹೇಳಿದೆ.

ಹೊಸದಾಗಿ ಪತ್ತೆಯಾದ ಪ್ರಕರಣಗಳ ಪೈಕಿಮಹಾರಾಷ್ಟ್ರ ಮೊದಲ ಸ್ಥಾನದಲ್ಲಿದೆ. ಈ ರಾಜ್ಯದಲ್ಲಿ 17,000ಕ್ಕೂ ಅಧಿಕ ಪ್ರಕರಣಗಳು ವರದಿಯಾಗಿವೆ. ನಂತರದ ಸ್ಥಾನಗಳಲ್ಲಿರುವ ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಕ್ರಮವಾಗಿ 8,000 ಹಾಗೂ 7,000 ಪ್ರಕರಣಗಳು ವರದಿಯಾಗಿವೆ.

ಕಳೆದ 24 ಗಂಟೆ ಅವಧಿಯಲ್ಲಿ ಕೋವಿಡ್‌ನಿಂದಾಗಿ ಒಟ್ಟು 1,089 ಸಾವು ಸಂಭವಿಸಿವೆ. ಈ ಪೈಕಿ ಗರಿಷ್ಠ 416 ಜನರು ಮಹಾರಾಷ್ಟ್ರದಲ್ಲಿ ಮೃತಪಟ್ಟಿದ್ದಾರೆ. ನಂತರದ ಸ್ಥಾನದಲ್ಲಿ ಕರ್ನಾಟಕ (86 ಸಾವು) ಹಾಗೂ ಉತ್ತರಪ್ರದೇಶ (84 ಸಾವು) ಇವೆ ಎಂದು ಸಚಿವಾಲಯ ತಿಳಿಸಿದೆ.

ದೇಶದಲ್ಲಿರುವ ಒಟ್ಟು ಪ್ರಯೋಗಾಲಯಗಳ ಸಂಖ್ಯೆ1,823

ಸರ್ಕಾರಿ ಪ್ರಯೋಗಾಲಯಗಳ ಸಂಖ್ಯೆ1,086

ಖಾಸಗಿ ವಲಯದಲ್ಲಿರುವ ಪ್ರಯೋಗಾಲಯಗಳು737

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.