ಭೋಪಾಲ್: 10 ವರ್ಷದ ಬಾಲಕ ಸುಮಾರು 140 ಅಡಿ ಆಳದ ಕೊಳವೆ ಬಾವಿಗೆ ಬಿದ್ದಿರುವ ಘಟನೆ ಮಧ್ಯಪ್ರದೇಶದ ಗುಣಾ ಜಿಲ್ಲೆಯಿಂದ ವರದಿಯಾಗಿದೆ.

ಜಿಲ್ಲಾ ಕೇಂದ್ರದಿಂದ ಸುಮಾರು 50 ಕಿ.ಮೀ. ದೂರದಲ್ಲಿರುವ ಪಿಪಲಿಯಾ ಗ್ರಾಮದಲ್ಲಿ ಬಾಲಕ ಸುಮಿತ್ ಮೀನಾ ಶನಿವಾರ ಸಂಜೆ ಆಕಸ್ಮಿಕವಾಗಿ ಆಗಿ ತೆರೆದ ಕೊಳವೆ ಬಾವಿಗೆ ಬಿದ್ದಿದ್ದನು.

ಬಾಲಕನ ರಕ್ಷಣೆಗಾಗಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಕೊಳವೆ ಬಾವಿಗೆ ಸಮಾನಂತರವಾಗಿ ಅಗೆಯಲಾಗುತ್ತಿದೆ, ಬಾಲಕನಿಗೆ ಆಮ್ಲಜನಕ ಪೂರೈಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಸತೇಂದ್ರ ಸಿಂಗ್ ತಿಳಿಸಿದ್ದಾರೆ.

ಸುಮಾರು 39 ಅಡಿ ಆಳದಲ್ಲಿ ಬಾಲಕ ಸಿಲುಕಿಕೊಂಡಿರುವುದಾಗಿ ಅಂದಾಜಿಸಲಾಗಿದೆ ಎಂದು ರಾಧೋಗಢ ಕ್ಷೇತ್ರದ ಕಾಂಗ್ರೆಸ್ ಶಾಸಕ ಜಯವರ್ಧನ್ ಸಿಂಗ್ ಮಾಹಿತಿ ನೀಡಿದ್ದಾರೆ.

ಭೋಪಾಲ್ನಿಂದ ಧಾವಿಸಿರುವ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್ಡಿಆರ್ಎಫ್) ರಕ್ಷಣಾ ಕಾರ್ಯಾಚರಣೆಯ ನೇತೃತ್ವ ವಹಿಸಿದೆ.
.ರಾಜಸ್ಥಾನ | ಕೊಳವೆ ಬಾವಿಗೆ ಬಿದ್ದ ಬಾಲಕಿ; ರಕ್ಷಣಾ ಕಾರ್ಯಾಚರಣೆ ಚುರುಕು.150 ಅಡಿ ಆಳದ ಕೊಳವೆ ಬಾವಿಗೆ ಬಿದ್ದ ಮಗುವಿನ ರಕ್ಷಣೆಗೆ ಮುಂದುವರಿದ ಕಾರ್ಯಾಚರಣೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.