ಶುಕ್ರವಾರ, 19 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ದೆಹಲಿ: 10 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ

Published 28 ಜೂನ್ 2024, 16:27 IST
Last Updated 28 ಜೂನ್ 2024, 16:27 IST
ಅಕ್ಷರ ಗಾತ್ರ

ನವದೆಹಲಿ: 10 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ, ಕೊಲೆಗೈದಿರುವ ಘಟನೆ ಉತ್ತರ ದೆಹಲಿಯಲ್ಲಿ ನಡೆದಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. 

ಯಾರೂ ಇಲ್ಲದ ನಿರ್ಜನ ಪ್ರದೇಶದಲ್ಲಿ ಬಾಲಕಿಯ ಮೃತದೇಹ ಶುಕ್ರವಾರ ಬೆಳಿಗ್ಗೆ ಪತ್ತೆಯಾಗಿದೆ. ಬಾಲಕಿಯ ಮನೆಯ ಅಕ್ಕಪಕ್ಕದವರೇ ಈ ಕೃತ್ಯವೆಸಗಿದ್ದಾರೆ ಎಂಬ ಆರೋಪವಿದ್ದು, ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.  

ಈ ಕುರಿತು ಪ್ರತಿಕ್ರಿಯಿಸಿದ ಪೊಲೀಸ್ ಅಧಿಕಾರಿ ರವಿಕುಮಾರ್ ಸಿಂಗ್, ‘ಸಂತ್ರಸ್ತೆಯ ತಂದೆ ಗುರುವಾರ ರಾತ್ರಿ 12.30ರ ಸುಮಾರಿಗೆ ಕರೆ ಮಾಡಿ, ತಮ್ಮ ಮಗಳು ರಾತ್ರಿ 9.45ರಿಂದ ಕಾಣಿಸುತ್ತಿಲ್ಲ ಎಂಬುದಾಗಿ ತಿಳಿಸಿದ್ದರು. ಆ ಬಳಿಕ ಶೋಧ ಕಾರ್ಯಾಚರಣೆ ನಡೆಸಿದ ಪೊಲೀಸರು, ಯಾರೂ ಇಲ್ಲದ ಸ್ಥಳದಲ್ಲಿರುವ ಬಾಲಕಿಯ ಮೃತದೇಹವನ್ನು ಪತ್ತೆ ಮಾಡಿದರು’ ಎಂದರು. 

ಬಾಲಕಿಯ ಮನೆಯ ಪಕ್ಕದಲ್ಲಿರುವ ರಾಹುಲ್ ಎಂಬಾತ ಬಾಲಕಿಯನ್ನು ಕರೆದೊಯ್ಯುತ್ತಿರುವುದನ್ನು ಸ್ಥಳೀಯರು ನೋಡಿದ್ದಾರೆ. ಅಲ್ಲದೆ, ಸಂತ್ರಸ್ತೆಯ ತಂದೆ ನೀಡಿದ ದೂರಿನ ಮೇರೆಗೆ ಇಬ್ಬರನ್ನು ಬಂಧಿಸಲಾಗಿದೆ ಎಂದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT