ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮತ್ತೆ 100 'ಆಮ್ ಆದ್ಮಿ ಕ್ಲಿನಿಕ್' ತೆರೆಯಲು ಪಂಜಾಬ್ ಸರ್ಕಾರ ನಿರ್ಧಾರ

Published 7 ಡಿಸೆಂಬರ್ 2023, 14:28 IST
Last Updated 7 ಡಿಸೆಂಬರ್ 2023, 14:28 IST
ಅಕ್ಷರ ಗಾತ್ರ

ಚಂಡೀಗಢ: ರಾಜ್ಯದ ಜನರಿಗೆ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವ ಸಲುವಾಗಿ ಸರ್ಕಾರವು ಮತ್ತೆ 100 'ಆಮ್‌ ಆದ್ಮಿ ಕ್ಲಿನಿಕ್‌'ಗಳನ್ನು ತೆರೆಯಲು ನಿರ್ಧರಿಸಿದೆ ಎಂದು ಪಂಜಾಬ್‌ ಮುಖ್ಯಮಂತ್ರಿ ಭಗವಂತ ಮಾನ್‌ ಗುರುವಾರ ತಿಳಿಸಿದ್ದಾರೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿದ ಅವರು, ರಾಜ್ಯದಲ್ಲಿ ಪ್ರಾಥಮಿಕ ಆರೋಗ್ಯ ಸೇವೆಯನ್ನು ಬಲಪಡಿಸಲು ಹಾಗೂ ಪರಿವರ್ತಿಸಲು ಸರ್ಕಾರ ಬದ್ಧವಾಗಿದೆ ಎಂದಿದ್ದಾರೆ.

'ರಾಜ್ಯ ಸರ್ಕಾರ ಈವರೆಗೆ 664 'ಆಮ್‌ ಆದ್ಮಿ ಕ್ಲಿನಿಕ್‌'ಗಳನ್ನು ಜನರಿಗೆ ಸಮರ್ಪಿಸಿದೆ. ಗುಣಮಟ್ಟದ ಚಿಕಿತ್ಸೆ ಒದಗಿಸುವ ಸಲುವಾಗಿ ಮುಂಬರುವ ದಿನಗಳಲ್ಲಿ ಇಂತಹ ಇನ್ನೂ ನೂರು ಕ್ಲಿನಿಕ್‌ಗಳನ್ನು ತೆರೆಯಲಾಗುವುದು' ಎಂದು ಮಾನ್‌ ಹೇಳಿರುವುದಾಗಿ ಅಧಿಕೃತ ಪ್ರಕಟಣೆಯಲ್ಲಿ ಉಲ್ಲೇಖಿಸಲಾಗಿದೆ.

ರಾಜ್ಯದ ಆರೋಗ್ಯ ವ್ಯವಸ್ಥೆಯನ್ನು ಮೇಲ್ದರ್ಜೆಗೇರಿಸಲು 'ಆಮ್‌ ಆದ್ಮಿ ಕ್ಲಿನಿಕ್‌' ಮೂಲಾಧಾರವಾಗಲಿದೆ. ಇದುವರೆಗೆ 80 ಲಕ್ಷ ರೋಗಿಗಳಿಗೆ ಈ ಕ್ಲಿನಿಕ್‌ಗಳಿಂದ ಲಾಭವಾಗಿದೆ ಎಂದೂ ಮಾನ್ ಹೇಳಿದ್ದಾರೆ.

ಮುಂದಿನ ವರ್ಷ ಐದು ವೈದ್ಯಕೀಯ ಕಾಲೇಜು
ದೇಶವು ಸ್ವಾತಂತ್ರ್ಯ ಪಡೆದು 75 ವರ್ಷ ಕಳೆದಿದ್ದರೂ ರಾಜ್ಯದಲ್ಲಿ ಕೇವಲ ಮೂರು ವೈದ್ಯಕೀಯ ಕಾಲೇಜುಗಳನ್ನಷ್ಟೇ ತೆರೆಯಲಾಗಿದೆ. ಆದರೆ, ಮುಂದಿನ ಒಂದೇ ವರ್ಷದಲ್ಲಿ ಐದು ಹೊಸ ವೈದ್ಯಕೀಯ ಕಾಲೇಜುಗಳು ಉದ್ಘಾಟನೆಗೊಳ್ಳಲಿವೆ ಎಂದು ಭಗವಂತ ಮಾನ್‌ ತಿಳಿಸಿದ್ದಾರೆ.

ಮುಂದಿನ ವರ್ಷಗಳಲ್ಲಿ, ರಾಜ್ಯದ ಪ್ರತಿ ಜಿಲ್ಲೆಯಲ್ಲಿಯೂ ವೈದ್ಯಕೀಯ ಕಾಲೇಜು ಆರಂಭಿಸಲಾಗುವುದು. ಆ ಮೂಲಕ ಜನಸಾಮಾನ್ಯರಿಗೆ ಆರೋಗ್ಯ ಖಾತ್ರಿ ನೀಡಲಾಗುವುದು. ರಾಜ್ಯದ ವೈದ್ಯಕೀಯ ವಿದ್ಯಾರ್ಥಿಗಳಿಗೂ ಇದರಿಂದ ಲಾಭವಾಗಲಿದೆ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT