ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಹಿಮಪಾತ

Published 20 ಏಪ್ರಿಲ್ 2024, 20:51 IST
Last Updated 20 ಏಪ್ರಿಲ್ 2024, 20:51 IST
ಅಕ್ಷರ ಗಾತ್ರ

ಶಿಮ್ಲಾ: ಹಿಮಾಚಲ ಪ್ರದೇಶದಲ್ಲಿ ಶನಿವಾರ ಮಳೆ, ಭಾರಿ ಹಿಮಪಾತದಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ಪ್ರಮುಖ ಮೂರು ರಾಷ್ಟ್ರೀಯ ಹೆದ್ದಾರಿಗಳು ಮತ್ತು 104 ರಸ್ತೆಗಳಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮನಾಲಿ-ಕೀಲಾಂಗ್ ಹೆದ್ದಾರಿಯ ಸಿಸ್ಸು ಬಳಿಯ ಸೆಲ್ಫಿ ಪಾಯಿಂಟ್‌ನಲ್ಲಿ ಭಾರಿ ಭೂಕುಸಿತದಿಂದಾಗಿ ಕೀಲಾಂಗ್‌ಗೆ ವಾಹನ ಸಂಚಾರ ಸ್ಥಗಿತಗೊಳಿಸಲಾಗಿದೆ ಎಂದು ಅವರು ಹೇಳಿದರು.

ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರದ ಪ್ರಕಾರ, ಲಾಹೌಲ್ ಮತ್ತು ಸ್ಪಿತಿಯಲ್ಲಿನ 99 ರಸ್ತೆಗಳು ಸೇರಿ 104 ರಸ್ತೆಗಳಲ್ಲಿ ಹಿಮಪಾತದಿಂದಾಗಿ ವಾಹನ ಸಂಚಾರ ಸ್ಥಗಿತಗೊಂಡಿದೆ.

ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಏಪ್ರಿಲ್ 22 ಮತ್ತು 23 ರಂದು ಗುಡುಗು ಸಹಿತ ಮಳೆ ಆಗಬಹುದು. 21ರಿಂದ 26 ರವರೆಗೆ ಆರು ದಿನಗಳವರೆಗೆ ಬೆಟ್ಟ ಪ್ರದೇಶಗಳಲ್ಲಿ ಭಾರಿ ಮಳೆ ಮತ್ತು ಹಿಮಪಾತವಾಗಲಿದೆ ಎಂದು ಹವಾಮಾನ ಕೇಂದ್ರ ಮುನ್ಸೂಚನೆ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT