ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತ್ರಿಪುರಾ: 11 ಜನ ಬಾಂಗ್ಲಾದೇಶಿಯರ ಬಂಧನ

Published 5 ಮೇ 2024, 9:09 IST
Last Updated 5 ಮೇ 2024, 9:09 IST
ಅಕ್ಷರ ಗಾತ್ರ

ಅಗರ್ತಲಾ: ತ್ರಿಪುರ ರಾಜ್ಯದ ಗಡಿ ಭಾಗದಲ್ಲಿ ಅಗತ್ಯ ದಾಖಲೆಗಳಿಲ್ಲದ ನಾಲ್ವರು ಮಕ್ಕಳು ಸೇರಿದಂತೆ 11 ಜನ ಬಾಂಗ್ಲಾದೇಶ ಪ್ರಜೆಗಳನ್ನು ಪೊಲೀಸರು ಬಂಧಿಸಿದ್ದಾರೆ.

ಧಲೈ ಜಿಲ್ಲೆಯ ಗಡಿ ಭಾಗದ ಗ್ರಾಮವೊಂದರಲ್ಲಿ ಅಕ್ರಮವಾಗಿ ದೇಶ ಪ್ರವೇಶಿಸಿದ ಆರೋಪದಡಿಯಲ್ಲಿ ಇವರನ್ನು ಬಂಧಿಸಲಾಗಿದೆ ಎಂದು ತ್ರಿಪುರಾ ಪೊಲೀಸರು ಭಾನುವಾರ ತಿಳಿಸಿದ್ದಾರೆ. 

ಅಕ್ರಮವಾಗಿ ದೇಶ ಪ್ರವೇಶಿಸಿದ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ. ಈ ಘಟನೆ ಬಗ್ಗೆ ತನಿಖೆ ಮಾಡಲಾಗುತ್ತಿದೆ ಎಂದು ತ್ರಿಪುರಾ ಪೊಲೀಸರು ಹೇಳಿದ್ದಾರೆ. 

ಬಂಧಿತರಿಂದ ಬೆಂಗಳೂರು ಮತ್ತು ಕೋಲ್ಕತ್ತ ಮಾರ್ಗದ ರೈಲು ಟಿಕೇಟ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT