ಮುಂಬೈ: ಮಹಾರಾಷ್ಟ್ರ ವಿಧಾನಸಭೆ ಸ್ಪೀಕರ್ ಭಾಸ್ಕರ್ ಜಾಧವ್ ಅವರ ಜೊತೆಗೆ ಅವರ ಕಚೇರಿಯಲ್ಲಿಯೇ ಅನುಚಿತವಾಗಿ ವರ್ತಿಸಿದ ಆರೋಪದ ಮೇಲೆ ಬಿಜೆಪಿಯ 12 ಶಾಸಕರನ್ನು ಒಂದು ವರ್ಷದ ಅವಧಿಗೆ ವಿಧಾನಸಭೆಯಿಂದ ಅಮಾನತುಪಡಿಸಲಾಗಿದೆ.

12 ಶಾಸಕರನ್ನು ಸದನದಿಂದ ಅಮಾನತುಪಡಿಸಬೇಕು ಎಂಬ ನಿಲುವಳಿಯನ್ನು ಸಂಸದೀಯ ವ್ಯವಹಾರಗಳ ಸಚಿವ ಅನಿಲ್ ಪರಬ್ ಮಂಡಿಸಿದ್ದು, ಸದನ ಇದನ್ನು ಧ್ವನಿಮತದಿಂದ ಅಂಗೀಕರಿಸಿತು.

ಸಂಜಯ್ ಕುಟೆ, ಆಶೀಷ್ ಶೆಲಾರ್, ಅಭಿಮನ್ಯು ಪವಾರ್, ಗಿರೀಶ್ ಮಹಾಜನ್, ಅತುಲ್ ಭಟ್ಕಲ್ಕರ್, ಪರಾಗ್ ಅಲ್ವಾಣಿ, ಹರೀಶ್ ಪಿಂಪಾಲೆ, ಯೋಗೇಶ್ ಸಾಗರ್, ಜಯ್ ಕುಮಾರ್ ರಾವತ್, ನಾರಾಯಣ್ ಕುಚೆ, ರಾಮ್ ಸತ್ಪುಟೆ ಮತ್ತು ಬಂಟಿ ಬಾಂಗ್ಡಿಯಾ ಅಮಾನತುಗೊಂಡ ಶಾಸಕರು.

ಅಮಾನತು ಅವಧಿಯಲ್ಲಿ ಈ ಶಾಸಕರಿಗೆ ಮುಂಬೈ, ನಾಗಪುರದಲ್ಲಿರುವ ಸಚಿವಾಲಯದ ಅವರಣಕ್ಕೆ ಪ್ರವೇಶ ನೀಡಲಾಗುವುದಿಲ್ಲ ಎಂದು ಪರಬ್ ತಿಳಿಸಿದರು. ಅಮಾನತು ಕ್ರಮಕ್ಕೆ ಆಕ್ಷೇಪಿಸಿದ ಬಿಜೆಪಿ ಶಾಸಕರು ಮುಖಂಡ ದೇವೇಂದ್ರ ಫಡಣವೀಸ್ ನೇತೃತ್ವದಲ್ಲಿ ಕಲಾಪ ಬಹಿಷ್ಕರಿಸಲಾಗುವುದು ಎಂದು ಪ್ರಕಟಿಸಿದರು.

‘ಇವು ಸುಳ್ಳು ಆರೋಪಗಳು. ಬಿಜೆಪಿಯ ಯಾವ ಶಾಸಕರು ನಿಂದನೆ ಮಾಡಿಲ್ಲ. ಶಿವಸೇನೆಯ ಶಾಸಕರು ಅವಾಚ್ಯ ಪದ ಬಳಸಿದ್ದಾರೆ. ಬಿಜೆಪಿ ಶಾಸಕ ಆಶೀಷ್ ಶೆಲಾರ್ ಕ್ಷಮೆಯಾಚಿಸಿದ್ದಾರೆ. ವಿಷಯ ಇಲ್ಲಿಗೆ ಮುಗಿದಿದೆ. ಜಾಧವ್ ಅವರು ಏಕಪಕ್ಷೀಯವಾಗಿ ವರ್ತಿಸುತ್ತಿದ್ದಾರೆ’ ಎಂದು ದೇವೇಂದ್ರ ಫಡಣವೀಸ್ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.