ಧಾರ್ (ಮಧ್ಯಪ್ರದೇಶ): ಮಹಾರಾಷ್ಟ್ರ ಸಾರಿಗೆ ಸಂಸ್ಥೆಗೆ ಸೇರಿದ ಬಸ್‌ವೊಂದು ಮಧ್ಯಪ್ರದೇಶದ ಧಾರ್ ಜಿಲ್ಲೆಯ ಕಾಲಾಘಾಟ್ ಸಂಜಯ್ ಸೇತು ಬಳಿ ಸೇತುವೆ ಮೇಲಿಂದ ನರ್ಮದಾ ನದಿಗೆ ಬಿದ್ದಿದ್ದು 12 ಮಂದಿ ಮೃತಪಟ್ಟಿದ್ದಾರೆ. 15 ಮಂದಿಯನ್ನು ರಕ್ಷಣೆ ಮಾಡಲಾಗಿದೆ.

ಬಸ್ ಮಧ್ಯಪ್ರದೇಶದ ಇಂದೋರ್‌ನಿಂದ ಮಹಾರಾಷ್ಟ್ರದ ಪುಣೆಗೆ ತೆರಳುತ್ತಿತ್ತು. ಈ ವೇಳೆ ದುರಂತ ಸಂಭವಿಸಿದೆ.

15 ಜನರನ್ನು ಈ ವರೆಗೆ ರಕ್ಷಣೆ ಮಾಡಿರುವುದಾಗಿ ಮಧ್ಯಪ್ರದೇಶದ ಸಚಿವ ನರೋತ್ತಮ ಮಿಶ್ರಾ ಸುದ್ದಿ ಸಂಸ್ಥೆ ಎಎನ್‌ಐಗೆ ಮಾಹಿತಿ ನೀಡಿದ್ದಾರೆ.

ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.