ಮಂಗಳವಾರ, 21 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಮ್ಮು | ಭಾರಿ ಮಳೆ; 12 ಮನೆಗಳು ಸಂಪೂರ್ಣ ಹಾನಿ

Published 30 ಏಪ್ರಿಲ್ 2024, 3:20 IST
Last Updated 30 ಏಪ್ರಿಲ್ 2024, 3:20 IST
ಅಕ್ಷರ ಗಾತ್ರ

ಜಮ್ಮು: ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯಲ್ಲಿ ಸುರಿದ ಭಾರಿ ಮಳೆಗೆ 12 ಮನೆಗಳು ಸಂಪೂರ್ಣ ಹಾನಿಗೊಳಗಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

‘ಕಳೆದ ನಾಲ್ಕು ದಿನಗಳಿಂದ ಈ ಪ್ರದೇಶದಲ್ಲಿ ಭಾರಿ ಮಳೆ ಸುರಿಯುತ್ತಿದ್ದು, ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ’ ಎಂದು ಹೇಳಿದರು.

ಹಸಿಲ್ ನಾಗಸೇನಿ, ಮುಘಲ್ ಮೈದಾನ ಮತ್ತು ಕಿಶ್ತ್ವಾರ್ ಪ್ರದೇಶಗಳಲ್ಲಿನ ಸುಮಾರು 12 ಮನೆಗಳಿಗೆ ಹಾನಿಯಾಗಿರುವುದು ಸಂಬಂಧಪಟ್ಟ ತಹಸೀಲ್ದಾರರ ಕಚೇರಿಯ ವರದಿಗಳಿಂದ ತಿಳಿದುಬಂದಿದೆ ಎಂದರು.

ಸಂತ್ರಸ್ತ ಕುಟುಂಬಗಳನ್ನು ಹತ್ತಿರದ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಿದ್ದು, ರೆಡ್‌ಕ್ರಾಸ್ ತಂಡ ಸಂತ್ರಸ್ತರಿಗೆ ಪರಿಹಾರ ಸಾಮಗ್ರಿಗಳನ್ನು ತಲುಪಿಸುತ್ತಿದೆ ಎಂದು ಹೇಳಿದ್ದಾರೆ.

ಮಳೆಯಿಂದ ಅಲ್ಲಲ್ಲಿ ಭೂಕುಸಿತ ಪ್ರಕರಣಗಳು ವರದಿಯಾಗಿದ್ದು, ಪೂಂಚ್‌ನ ಮಂಡಿ ಪ್ರದೇಶದ ಬೀದರ್ ಗ್ರಾಮದಲ್ಲಿ ಸಂಭವಿಸಿದ ಭೂಕುಸಿತದಿಂದ ಹಲವಾರು ಮನೆಗಳು ಹಾನಿಗೊಳಗಾಗಿವೆ. ಇದರ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT