ಜೈಪುರ: ರಾಜಸ್ಥಾನದ ಧೋಲ್ಪುರ ಜಿಲ್ಲೆಯಲ್ಲಿ ಬಸ್ ಹಾಗೂ ಟೆಂಪೊ ನಡುವೆ ಸಂಭವಿಸಿದ ಅಪಘಾತದಲ್ಲಿ ಎಂಟು ಮಕ್ಕಳು ಸೇರಿದಂತೆ ಒಂದೇ ಕುಟುಂಬದ 12 ಮಂದಿ ಮೃತಪಟ್ಟಿದ್ದಾರೆ.

ಜೈಪುರದಿಂದ ಗ್ವಾಲಿಯರ್ ಕಡೆಗೆ ಶನಿವಾರ ರಾತ್ರಿ ವೇಗವಾಗಿ ಹೋಗುತ್ತಿದ್ದ ಸ್ಲೀಪರ್ ಕೋಚ್ ಬಸ್ ಸುಮಿಪುರ ಸಮೀಪ ಟೆಂಪೊಗೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸ್ ಅಧಿಕಾರಿ ಶಿವಲಹರಿ ಮೀನಾ ತಿಳಿಸಿದ್ದಾರೆ.

ಸಂತ್ರಸ್ತರೆಲ್ಲರೂ ಕರೀಂ ಗುಮ್ವತ್ ಕಾಲೋನಿಯ ನಿವಾಸಿಗಳಾಗಿದ್ದು, ಒಂದೇ ಕುಟುಂಬಕ್ಕೆ ಸೇರಿದವರಾಗಿದ್ದಾರೆ. ಇವರೆಲ್ಲರೂ ಬರೌಲಿ ಗ್ರಾಮದಲ್ಲಿ ನಡೆದ ವಿವಾಹ ಸಮಾರಂಭ ಮುಗಿಸಿ ವಾಪಸಾಗುತ್ತಿದ್ದರು.

ಗಾಯಗೊಂಡವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಷ್ಟರಲ್ಲಿ 11 ಮಂದಿ ಮೃತಪಟ್ಟಿದ್ದರು ಎಂದು ಘೋಷಿಸಲಾಯಿತು. ಒಬ್ಬರು ಆಸ್ಪತ್ರೆಯಲ್ಲಿ ಮೃತಪಟ್ಟರು ಎಂದು ಮುಖ್ಯ ವೈದ್ಯಕೀಯ ಮತ್ತು ಆರೋಗ್ಯ ಅಧಿಕಾರಿ ಡಾ. ಹರಿಕಿಶನ್ ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಮೃತಪಟ್ಟ ಕುಟುಂಬದ ಪ್ರತಿ ಸದಸ್ಯರ ಸಂಬಂಧಿಕರಿಗೆ ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ ₹2 ಲಕ್ಷ ಘೋಷಿಸಿದ್ದಾರೆ. ಗಾಯಗೊಂಡವರಿಗೆ ₹ 50,000 ಸಿಗಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.