ನವದೆಹಲಿ: ದೆಹಲಿಯ ಇಂದಿರಾ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ(ಐಜಿಐ) ಯಂತ್ರದ ಬಿಡಿಭಾಗದೊಳಗೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 1.2 ಕೆ.ಜಿ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಕಸ್ಟಮ್ಸ್ ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

ನವೆಂಬರ್ 15ರಂದು ಸಿಂಗಾಪುರದಿಂದ ದೆಹಲಿಗೆ ಬಂದಿದ್ದ ಪ್ರಯಾಣಿಕರೊಬ್ಬರ ಸರಕಿನೊಳಗೆ ಚಿನ್ನವಿರುವುದು ಪತ್ತೆಯಾಗಿದೆ. ಅವರನ್ನು ಅಧಿಕಾರಿಗಳು ಪ್ರಶ್ನಿಸಿದಾಗ, 1.2 ಕೆ.ಜಿ ಚಿನ್ನವಿರುವುದನ್ನು ಒಪ್ಪಿಕೊಂಡಿದ್ದಾರೆ.

ಯಂತ್ರದ ಬಿಡಿಭಾಗಗಳನ್ನು ತಯಾರಿಸುವ ಕಂಪನಿಯಲ್ಲಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ವ್ಯಕ್ತಿಯೊಬ್ಬರಿಗೆ ಸೇರಿದ್ದ 10.8 ಕೆ.ಜಿ ತೂಕವಿದ್ದ ಸರಕೊಂದು ವಿಮಾನ ನಿಲ್ದಾಣದ ಹೊಸ ಕೊರಿಯರ್ ಟರ್ಮಿನಲ್ನಲ್ಲಿ ಅನುಮತಿಗಾಗಿ ಬಾಕಿ ಇತ್ತು. ಅವರು ಅದನ್ನು ಪಡೆಯಲು ಬಂದಾಗ, ತಪಾಸಣೆಯ ವೇಳೆ ಅದರೊಳಗೆ ಚಿನ್ನವಿರುವುದು ಪತ್ತೆಯಾಗಿದೆ ಎಂದು ತಿಳಿಸಿದ್ದಾರೆ.

ಆರೋಪಿಯನ್ನು ಬಂಧಿಸಲಾಗಿದ್ದು, ಹೆಚ್ಚಿನ ವಿಚಾರಣೆ ಮಾಡಲಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.