ನವದೆಹಲಿ: ಮಧ್ಯಪ್ರದೇಶ ಹಾಗೂ ಬಿಹಾರ ರಾಜ್ಯದಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ 12 ಜನರು ಮೃತಪಟ್ಟು 24 ಜನರು ಗಾಯಗೊಂಡಿದ್ದಾರೆ.
ಮಧ್ಯಪ್ರದೇಶದ ಮೇಹಾರ್ ಜಿಲ್ಲೆಯಲ್ಲಿ ಶನಿವಾರ ತಡರಾತ್ರಿ ಖಾಸಗಿ ಬಸ್ ಹಾಗೂ ಟ್ರಕ್ ನಡುವೆ ಸಂಭವಿಸಿದ ಅಪಘಾತದಲ್ಲಿ 9 ಜನರು ಮೃತಪಟ್ಟು 20 ಹೆಚ್ಚು ಜನರು ಗಾಯಗೊಂಡಿದ್ದಾರೆ.
ಮೇಹಾರ್ ಜಿಲ್ಲೆಯಲ್ಲಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿ 30ರಲ್ಲಿ ಶನಿವಾರ ತಡರಾತ್ರಿ ಈ ಅವಘಡ ಸಂಭವಿಸಿದೆ. ಗಾಯಾಳುಗಳನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಉತ್ತರಪ್ರದೇಶದ ಪ್ರಯಾಗ್‌ರಾಜ್‌ನಿಂದ ಬರುತ್ತಿದ್ದ ಬಸ್ ಮಹಾರಾಷ್ಟ್ರದ ನಾಗಪುರಕ್ಕೆ ತೆರಳುತ್ತಿತ್ತು. ರಾತ್ರಿ 11ಗಂಟೆ ಸುಮಾರಿಗೆ ನಿಂತಿದ್ದ ಲಾರಿಗೆ ಬಸ್ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಘಟನೆ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಸ್ ಅತಿವೇಗದಲ್ಲಿ ಚಲಿಸುತ್ತಿದ್ದರಿಂದ ಈ ಅಪಘಾತ ಸಂಭವಿಸಿದೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ.