ದಾಮೋಹ್: ಮಧ್ಯಪ್ರದೇಶದ ದಾಮೋಹ್ ಜಿಲ್ಲೆಯಲ್ಲಿ ಹುಟ್ಟುಹಬ್ಬದ ಪಾರ್ಟಿಗೆ ತೆರಳುತ್ತಿದ್ದ 12 ವರ್ಷದ ಬಾಲಕಿಯ ಮೇಲೆ ಮೂವರು ವ್ಯಕ್ತಿಗಳು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಗುರುವಾರ ಸಂಜೆ ಬಾಲಕಿ ಹುಟ್ಟುಹಬ್ಬದ ಪಾರ್ಟಿಗಾಗಿ ತನ್ನ ಸೋದರ ಸಂಬಂಧಿಯ ಮನೆಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ, ಆಕೆಗೆ ಪರಿಚಯಸ್ಥರಲ್ಲಿ ಒಬ್ಬರು ಬಳಿಗೆ ಬಂದು ತನ್ನ ಇಬ್ಬರು ಸಹಚರರೊಂದಿಗೆ ಬಲವಂತವಾಗಿ ಕಾರಿನಲ್ಲಿ ಕರೆದೊಯ್ದಿದ್ದಾರೆ. ಬಾಲಕಿಯನ್ನು ನಿರ್ಜನ ಸ್ಥಳಕ್ಕೆ ಕರೆದೊಯ್ದು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೇಹತ್ ಪೊಲೀಸ್ ಠಾಣೆಯ ಪ್ರಭಾರಿ ಮನೀಶ್ ಕುಮಾರ್ ಹೇಳಿದ್ದಾರೆ.

ಘಟನೆಯ ಬಳಿಕ ಬಾಲಕಿ ಮನೆಗೆ ಬಂದು ಕುಟುಂಬ ಸದಸ್ಯರಿಗೆ ಮಾಹಿತಿ ನೀಡಿದ್ದಾಳೆ. ಆಕೆಯ ಪೋಷಕರು ನೀಡಿದ ದೂರಿನ ಆಧಾರದ ಮೇಲೆ ಭಾರತೀಯ ನ್ಯಾಯ ಸಂಹಿತೆಯ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಆರೋಪಿಗಳ ಪತ್ತೆಗಾಗಿ ಹುಡುಕಾಟ ನಡೆಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.