ಶನಿವಾರ, 7 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಪ್ರತ್ಯೇಕ ಅಪಘಾತ: 13 ಜನ ಸಾವು

Published 20 ಆಗಸ್ಟ್ 2024, 7:35 IST
Last Updated 20 ಆಗಸ್ಟ್ 2024, 7:35 IST
ಅಕ್ಷರ ಗಾತ್ರ

ನವದೆಹಲಿ: ದೇಶದ ವಿವಿಧ ಕಡೆ ಸಂಭವಿಸಿದ ರಸ್ತೆ ಅಪಘಾತದಲ್ಲಿ 13 ಜನರು ಮೃತಪಟ್ಟು ಹಲವರು ಗಾಯಗೊಂಡಿದ್ದಾರೆ. 

ಮಧ್ಯಪ್ರದೇಶದ ಛತ್ತರ್‌ಪುರ ಬಳಿ ಮಂಗಳವಾರ ಬೆಳಗ್ಗೆ ನಿಂತಿದ್ದ ಲಾರಿಗೆ ಹಿಂದಿನಿಂದ ಆಟೊರಿಕ್ಷಾ ಗುದ್ದಿದ ಪರಿಣಾಮ, ಒಂದು ವರ್ಷದ ಮಗು ಸೇರಿದಂತೆ ಏಳು ಜನರು ಮೃತಪಟ್ಟಿದ್ದು, ಆರು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. 

ಝಾನ್ಸಿ ಹೆದ್ದಾರಿಯಲ್ಲಿ ಈ ಅಪಘಾತ ನಡೆದಿದ್ದು ಗಾಯಾಳುಗಳನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಉತ್ತರಪ್ರದೇಶ: ನೋಯ್ಡಾದಲ್ಲಿ ಕ್ಯಾಂಟರ್‌ವೊಂದು ರಸ್ತೆ ಬದಿ ನಿಲ್ಲಿಸಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಮೃತಪಟ್ಟು 24 ಜನರು ಗಾಯಗೊಂಡಿದ್ದಾರೆ.

ಚಕ್ರ ಸ್ಫೋಟಗೊಡಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿದ ಕ್ಯಾಂಟರ್‌ ರಸ್ತೆ ಬದಿ ನಿಲ್ಲಿಸಿದ್ದ ಲಾರಿಗೆ ಡಿಕ್ಕಿ ಹೊಡೆದಿದ್ದರಿಂದ ಈ ಅವಘಡ ಸಂಭವಿಸಿದೆ.

ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ನಾಗಪುರ: ಮಹಾರಾಷ್ಟ್ರದ ನಾಗಪುರ ಜಿಲ್ಲೆಯ ಕಮಲೇಶ್ವರ ತಾಲ್ಲೂಕಿನಲ್ಲಿ ಬೈಕ್‌ಗೆ ಟ್ಯಾಂಕರ್‌ ಡಿಕ್ಕಿ ಹೊಡೆದ ಪರಿಣಾಮ ಸಹೋದರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

 ಈ ಘಟನೆ ಸಂಬಂಧ ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT