ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

LS Polls | ಮೂರನೇ ಹಂತ: 1351 ಅಭ್ಯರ್ಥಿಗಳು ಕಣದಲ್ಲಿ

Published 23 ಏಪ್ರಿಲ್ 2024, 15:54 IST
Last Updated 23 ಏಪ್ರಿಲ್ 2024, 15:54 IST
ಅಕ್ಷರ ಗಾತ್ರ

ನವದೆಹಲಿ: ದೇಶದ 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮೂರನೇ ಹಂತದಲ್ಲಿ ನಡೆಯಲಿರುವ ಲೋಕಸಭಾ ಚುನಾವಣಾ ಕಣದಲ್ಲಿ ಒಟ್ಟಾರೆ 1,351 ಅಭ್ಯರ್ಥಿಗಳಿದ್ದಾರೆ ಎಂದು ಚುನಾವಣಾ ಆಯೋಗ ಮಂಗಳವಾರ ತಿಳಿಸಿದೆ. 

ಎರಡನೇ ಹಂತದಲ್ಲಿ ನಡೆಯಬೇಕಿದ್ದ, ಬಿಎಸ್‌ಪಿ ಅಭ್ಯರ್ಥಿಯ ಅಕಾಲಿಕ ಮರಣದಿಂದಾಗಿ ಮೂರನೇ ಹಂತದಲ್ಲಿ ಮತದಾನ ನಿಗದಿಯಾಗಿರುವ ಮಧ್ಯಪ್ರದೇಶದ ಬೇತುಲ್ ಕ್ಷೇತ್ರದಿಂದ ಎಂಟು ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ ಎಂದು ಆಯೋಗ ಹೇಳಿಕೆ ಬಿಡುಗಡೆ ಮಾಡಿದೆ. 

ಮೂರನೇ ಹಂತದ ಮತದಾನ ಮೇ 7ರಂದು ನಡೆಯಲಿದ್ದು, ಉಮೇದುವಾರಿಕೆ ಹಿಂಪಡೆಯಲು ಏಪ್ರಿಲ್ 22 ಕೊನೆಯ ದಿನವಾಗಿತ್ತು. 95 ಕ್ಷೇತ್ರಗಳಲ್ಲಿ ಒಟ್ಟಾರೆ 2,963 ಅಭ್ಯರ್ಥಿಗಳು ಉಮೇದುವಾರಿಕೆ ಸಲ್ಲಿಸಿದ್ದರು. 

ಗುಜರಾತ್‌ನ 26 ಕ್ಷೇತ್ರಗಳಿಂದ ಗರಿಷ್ಠ 658 ಅಭ್ಯರ್ಥಿಗಳು ಕಣಕ್ಕಿಳಿದಿದ್ದರೆ, ಮಹಾರಾಷ್ಟ್ರದ 11 ಲೋಕಸಭಾ ಕ್ಷೇತ್ರಗಳಿಗೆ 519 ಮಂದಿ ನಾಮಪತ್ರ ಸಲ್ಲಿಸಿದ್ದಾರೆ ಎಂದಿದೆ ಆಯೋಗ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT