ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

1,365 ಐಎಎಸ್‌, 703 ಐಪಿಎಸ್‌ ಹುದ್ದೆಗಳು ಖಾಲಿ: ಕೇಂದ್ರ ಸರ್ಕಾರ

Published 3 ಆಗಸ್ಟ್ 2023, 11:21 IST
Last Updated 3 ಆಗಸ್ಟ್ 2023, 11:21 IST
ಅಕ್ಷರ ಗಾತ್ರ

ನವದೆಹಲಿ: ದೇಶದಲ್ಲಿ ಭಾರತೀಯ ಆಡಳಿತಾತ್ಮಕ ಸೇವೆಯಲ್ಲಿ (ಐಎಎಸ್‌) 1,365 ಹಾಗೂ ಭಾರತೀಯ ಪೊಲೀಸ್‌ ಸೇವೆಯಲ್ಲಿ (ಐಪಿಎಸ್‌) 703 ಹುದ್ದೆಗಳು ಖಾಲಿ ಇವೆ ಎಂದು ಕೇಂದ್ರ ಸರ್ಕಾರ ಹೇಳಿದೆ.

ಭಾರತೀಯ ಅರಣ್ಯ ಸೇವೆಯಲ್ಲಿ (ಐಎಫ್‌ಎಸ್‌) 1,042 ಹಾಗೂ ಭಾರತೀಯ ಕಂದಾಯ ಸೇವೆಯಲ್ಲಿ (ಐಆರ್‌ಎಸ್‌) 301 ಹುದ್ದೆಗಳು ಖಾಲಿ ಉಳಿದಿವೆ. ಈ ಹುದ್ದೆಗಳ ಭರ್ತಿಗೆ ಕೇಂದ್ರ ಸರ್ಕಾರ ಕ್ರಮವಹಿಸಿದ್ದು, ನೇಮಕಾತಿ ಪ್ರಕ್ರಿಯೆಯೂ ನಡೆಯುತ್ತಿದೆ ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್‌ ಅವರು, ರಾಜ್ಯಸಭೆಯಲ್ಲಿ ನೀಡಿರುವ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.

ಐಎಎಸ್, ಐಪಿಎಸ್, ಐಎಫ್ಎಸ್ ಮತ್ತು ಐಆರ್‌ಎಸ್‌ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುವುದು. ಕೇಂದ್ರ ಲೋಕಸೇವಾ ಆಯೋಗ ಪ್ರತಿವರ್ಷ ನಾಗರಿಕ ಸೇವಾ ಪರೀಕ್ಷೆ (ಸಿಎಸ್ಇ) ನಡೆಸುವ ಮೂಲಕ ನೇಮಕಾತಿ ಮಾಡಿಕೊಳ್ಳುತ್ತದೆ ಎಂದು ಅವರು ಮಾಹಿತಿ ನೀಡಿದರು.

ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ಹಾಗೂ ರಾಜ್ಯ ಸರ್ಕಾರಗಳ ಆಯ್ಕೆ ಸಮಿತಿ ಸಭೆಯ ಮೂಲಕ ಐಎಎಸ್‌ ಹಾಗೂ ಐಪಿಎಸ್‌ ಹುದ್ದೆಗಳಿಗೆ ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಧಿಕಾರಿಗಳಿಗೆ ಬಡ್ತಿ ನೀಡಲಾಗುತ್ತದೆ ಎಂದು ವಿವರಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT