ಶಿಮ್ಲಾ: ಹಿಮಾಚಲ ಪ್ರದೇಶದ ಸೋಲನ್ ಜಿಲ್ಲೆಯಲ್ಲಿ ಬಹುಮಹಡಿ ಕಟ್ಟಡ ಭಾನುವಾರ ಕುಸಿದು ಬಿದ್ದಿದ್ದು, ಯೋಧ ಸೇರಿ ಇಬ್ಬರು ಮೃತಪಟ್ಟಿದ್ದಾರೆ.

ಕಟ್ಟಡದ ಅವಶೇಷಗಳಡಿ 37 ಮಂದಿ ಸಿಲುಕಿರುವ ಶಂಕೆ ಇದೆ ಎಂದು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದ್ದಾರೆ. 23 ಮಂದಿಯನ್ನು ರಕ್ಷಿಸಲಾಗಿದೆ. ಗಾಯಗೊಂಡವರಲ್ಲಿ ಎಂಟು ಮಂದಿ ಯೋಧರೂ ಸೇರಿದ್ದಾರೆ.

ನಾಹನ್ ಕುಮಾರ್ಹಟ್ಟಿ ರಸ್ತೆಯಲ್ಲಿನ ಈ ಕಟ್ಟಡದಲ್ಲಿ ರೆಸ್ಟೋರೆಂಟ್ ಇತ್ತು. ಭಾರಿ ಮಳೆ ಸುರಿಯುತ್ತಿದ್ದ ವೇಳೆ ಕಟ್ಟಡ ಕುಸಿಯಿತು ಎಂದು ಪೊಲೀಸರು ತಿಳಿಸಿದ್ದಾರೆ.

ಸೇನಾ ಯೋಧರು ತಮ್ಮ ಕುಟುಂಬ ಸದಸ್ಯರ ಜತೆ ಉತ್ತರಾಖಂಡಕ್ಕೆ ತೆರಳಿ ರೆಸ್ಟೋರೆಂಟ್ನಲ್ಲಿ ಉಪಾಹಾರ ಸೇವಿಸಲು ಬಂದಿದ್ದರು. ಇದೇ ವೇಳೆ ಕಟ್ಟಡ ಕುಸಿದಿದೆ.

ದುರ್ಘಟನಾ ಸ್ಥಳಕ್ಕೆ ಜಿಲ್ಲಾಡಳಿತದ ಅಧಿಕಾರಿಗಳು ದೌಡಾಯಿಸಿದ್ದು, ಪರಿಹಾರ ಕಾರ್ಯಾಚರಣೆಯನ್ನು ಆರಂಭಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.