ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಥುರಾ ಪಟಾಕಿ ಅಂಗಡಿಗಳಲ್ಲಿ ಅಗ್ನಿ ಅವಘಡ: 14 ಮಂದಿಗೆ ಗಾಯ, 8 ಜನರ ಸ್ಥಿತಿ ಗಂಭೀರ

Published 14 ನವೆಂಬರ್ 2023, 3:01 IST
Last Updated 14 ನವೆಂಬರ್ 2023, 3:01 IST
ಅಕ್ಷರ ಗಾತ್ರ

ಲಖನೌ: ಮಥುರಾ ಹೊರವಲಯದ ಗೋಪಾಲಬಾಗ್‌ನಲ್ಲಿ ಏಳು ಪಟಾಕಿ ಅಂಗಡಿಗಳಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಪರಿಣಾಮ ಒಬ್ಬ ಅಗ್ನಿಶಾಮಕ ಸಿಬ್ಬಂದಿ ಸೇರಿದಂತೆ 14 ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.

ದೀಪಾವಳಿ ನಿಮಿತ್ತ ರಾಯ ಪಟ್ಟಣದಲ್ಲಿ ತೆರೆಯಲಾಗಿದ್ದ ತಾತ್ಕಾಲಿಕ ಪಟಾಕಿ ಮಾರುಕಟ್ಟೆಯಲ್ಲಿ ಈ ಅವಘಡ ಸಂಭವಿಸಿದೆ.

ಗಾಯಗೊಂಡವರಲ್ಲಿ 8 ಜನರ ಸ್ಥಿತಿ ಗಂಭೀರವಾಗಿದೆ. ಅವರನ್ನು ಆಗ್ರಾದ ಎಸ್‌ಎನ್ ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಗಿದೆ. ಘಟನೆಯಲ್ಲಿ ಯಾವುದೇ ಸಾವು ಸಂಭವಿಸಿಲ್ಲ. ಆದರೆ, ಹತ್ತು ಬೈಕ್‌ಗಳು ಬೆಂಕಿಗೆ ಆಹುತಿಯಾಗಿವೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT