ಹೈದರಾಬಾದ್: ತೆಲಂಗಾಣದ ಭದ್ರಾದ್ರಿ ಕೊಥಗುಡೆಮ್ ಜಿಲ್ಲೆಯಲ್ಲಿ ನಿಷೇಧಿತ ಸಿಪಿಐ (ಮಾವೋವಾದಿ) ಸಂಘಟನೆಯ 14 ಸದಸ್ಯರು ಇಂದು (ಸೋಮವಾರ) ಪೊಲೀಸರ ಮುಂದೆ ಶರಣಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸ್ ವರಿಷ್ಠಾಧಿಕಾರಿ ಬಿ.ರೋಹಿತ್ ರಾಜು ಅವರ ಮುಂದೆ ಮಾವೋವಾದಿಗಳು ಶರಣಾಗಿದ್ದಾರೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.

‘ಆಪರೇಷನ್ ಚೆಯುತ’ ಮೂಲಕ ಬುಡಕಟ್ಟು ಜನರ ಕಲ್ಯಾಣಕ್ಕಾಗಿ ಪೊಲೀಸರು ಮತ್ತು ಸಿಆರ್ಪಿಎಫ್ ನಡೆಸಿದ ಚಟುವಟಿಕೆಗಳು ಮತ್ತು ಶರಣಾದ ಮಾವೋವಾದಿಗಳಿಗೆ ಘೋಷಿಸಲಾದ ಕಲ್ಯಾಣ ಕ್ರಮಗಳ ಬಗ್ಗೆ ತಿಳಿದ ನಂತರ ತಮ್ಮ ಕುಟುಂಬ ಸದಸ್ಯರೊಂದಿಗೆ ಶಾಂತಿಯುತ ಜೀವನ ನಡೆಸಲು ನಿರ್ಧರಿಸಿ ಮಾವೋವಾದಿಗಳು ಶರಣಾಗಿದ್ದಾರೆ’ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಕಳೆದ ಎರಡು ತಿಂಗಳಲ್ಲಿ ಒಟ್ಟು 44 ಮಾವೋವಾದಿಗಳು ಪೊಲೀಸರ ಮುಂದೆ ಶರಣಾಗಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.