ಶುಕ್ರವಾರ, 17 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಬಾ ರಾಮದೇವ ಕಂಪನಿಯ ಪರವಾನಗಿ ಅಮಾನತಾದ ಔಷಧಿಗಳ ಪಟ್ಟಿ ಇಂತಿದೆ

Published 30 ಏಪ್ರಿಲ್ 2024, 10:48 IST
Last Updated 30 ಏಪ್ರಿಲ್ 2024, 10:48 IST
ಅಕ್ಷರ ಗಾತ್ರ

ನವದೆಹಲಿ: ಯೋಗ ಗುರು ಬಾಬಾ ರಾಮದೇವ ಅವರಿಗೆ ಸೇರಿದ ಔಷಧ ಕಂಪನಿಗಳು ತಯಾರಿಸುವ 14 ಬಗೆಯ ಉತ್ಪನ್ನಗಳ ತಯಾರಿಕೆಗೆ ನೀಡಿರುವ ಪರವಾನಗಿಯನ್ನು ಉತ್ತರಾಖಂಡ ಸರ್ಕಾರವು ಅಮಾನತಿನಲ್ಲಿ ಇರಿಸಿದೆ.

ಔಷಧಗಳ ಸಾಮರ್ಥ್ಯದ ಬಗ್ಗೆ ತಪ್ಪು ದಾರಿಗೆ ಎಳೆಯುವ ಜಾಹೀರಾತುಗಳನ್ನು ಮತ್ತೆ ಮತ್ತೆ ಪ್ರಕಟಿಸಿದ್ದಕ್ಕಾಗಿ ಈ ರೀತಿ ಮಾಡಲಾಗಿದೆ ಎಂದು ಸರ್ಕಾರ ತಿಳಿಸಿದೆ.

ಈ ಆದೇಶವು ರಾಮದೇವ ಅವರಿಗೆ ಆಗಿರುವ ಹಿನ್ನಡೆ ಎಂದು ವಿಶ್ಲೇಷಿಸಲಾಗಿದೆ. ರಾಮದೇವ ಅವರು ಈಚಿನ ದಿನಗಳಲ್ಲಿ ಸುಪ್ರೀಂ ಕೋರ್ಟ್‌ನ ಕೋಪಕ್ಕೂ ತುತ್ತಾಗಿದ್ದಾರೆ.

ಉತ್ತರಾಖಂಡ ಸರ್ಕಾರವು ಏಪ್ರಿಲ್‌ 15ರಂದು ಈ ಅಮಾನತು ಆದೇಶ ಹೊರಡಿಸಿದೆ. ಅಸ್ತಮಾ, ಶ್ವಾಸನಾಳಗಳ ಒಳಪೊರೆಯ ಉರಿಯೂತ (ಬ್ರಾಂಕೈಟಿಸ್) ಮತ್ತು ಮಧುಮೇಹ ಔಷಧಿಗಳ ತಯಾರಿಕಾ ಪರವಾನಗಿಯನ್ನು ಅಮಾನತು ಮಾಡಲಾಗಿದೆ.

ಪರವಾನಗಿ ಅಮಾನತ್ತಾದ 14 ಔಷಧಗಳ ಪಟ್ಟಿ ಇಂತಿದೆ...

* ಶ್ವಾಸಾರಿ ಗೋಲ್ಡ್

* ಶ್ವಾಸಾರಿ ವಟಿ

* ಬ್ರಾಂಕೋಮ್

* ಶ್ವಾಸಾರಿ ಪ್ರವಾಹಿ

* ಶ್ವಾಸಾರಿ ಅವಲೇಹ್

* ಮುಕ್ತಾವತಿ ಎಕ್ಸ್‌ಟ್ರಾ ಪವರ್

* ಲಿಪಿಡೋಮ್ 

* ಬಿಪಿ ಗ್ರಿಟ್

* ಮಧುಗ್ರಿಟ್

* ಮಧುನಾಶಿನಿವತಿ ಎಕ್ಸ್‌ಟ್ರಾ ಪವರ್

* ಲಿವಾಮೃತ್ ಅಡ್ವಾನ್ಸ್

* ಲಿವೋಗ್ರಿಟ್

* ಐಗ್ರಿಟ್ ಗೋಲ್ಡ್

* ಪತಂಜಲಿ ದೃಷ್ಟಿ ಐ ಡ್ರಾಪ್

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT