ಸಿ.ಸಿ.ಟಿ.ವಿ. ಕ್ಯಾಮೆರಾದಲ್ಲಿ ಸೆರೆಯಾದ ದೃಶ್ಯಗಳನ್ನು ಆಧರಿಸಿ ಆರೋಪಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ವಿಚಾರಣೆ ವೇಳೆ ತಾನು ಎಸಗಿರುವ ಅಪರಾಧವನ್ನು ಆತ ಒಪ್ಪಿಕೊಂಡಿದ್ದಾನೆ. ಆತನ ವಿರುದ್ಧ ಭಾರತೀಯ ಸಂಹಿತೆಯ ವಿವಿಧ ಸೆಕ್ಷನ್ಗಳ ಅಡಿ ದೂರು ದಾಖಲಿಸಲಾಗಿದೆ. ಜೊತೆಗೆ, ಮಕ್ಕಳ ವಿರುದ್ಧ ಲೈಂಗಿಕ ಅಪರಾಧ ತಡೆ ಕಾಯ್ದೆ (ಪೋಕ್ಸೊ) ಅಡಿಯೂ ದೂರು ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದರು.