ಬಲ್ಲಿಯಾ: ಉತ್ತರ ಪ್ರದೇಶದ ಬಲ್ಲಿಯಾದಲ್ಲಿ 14 ವರ್ಷದ ಬಾಲಕಿಯನ್ನು ಅಪಹರಿಸಿ, ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ದೋಕತಿ ಪೊಲೀಸ್ ಠಾಣೆ ಪ್ರದೇಶದ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಬಾಲಕಿ ತನ್ನ ಸಂಬಂಧಿಕರ ಮನೆಗೆ ಹೋಗಿದ್ದಳು ಎಂದು ಅವರು ಹೇಳಿದ್ದಾರೆ.

ಮಾರ್ಚ್ 14ರಂದು ರಾತ್ರಿ 10 ಗಂಟೆ ಸುಮಾರಿಗೆ ಸೂರಜ್ ಸೋನಿ ಮತ್ತು ಇತರ ಇಬ್ಬರು ಯುವಕರು ಬಾಲಕಿಗೆ ಬಂದೂಕು ತೋರಿಸಿ ಆಕೆಯನ್ನು ಅಪಹರಿಸಿ, ಮೂವರು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಬಾಲಕಿಯ ಸೋದರ ಮಾವ ದೂರಿನಲ್ಲಿ ಉಲ್ಲೇಖಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪ್ರಕರಣ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ಬೈರಿಯಾದ ವೃತ್ತ ಅಧಿಕಾರಿ (ಸಿಒ) ಮೊಹಮ್ಮದ್ ಫಾಹಿಮ್ ಖುರೇಷಿ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.