ಮುಂಬೈ: ಮಹಾರಾಷ್ಟ್ರದ ರಾಯಗಢ ಜಿಲ್ಲೆಯಲ್ಲಿ ಶೈಕ್ಷಣಿಕ ಪ್ರವಾಸದ ವೇಳೆ 14 ವರ್ಷದ ವಿದ್ಯಾರ್ಥಿಯೊಬ್ಬ ಹೃದಯಾಘಾತದಿಂದ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ನವಿ ಮುಂಬೈ ಪುರಸಭೆ ನಡೆಸುವ ಘನ್ಸೋಲಿಯಲ್ಲಿರುವ ಶಾಲೆಯ ವಿದ್ಯಾರ್ಥಿಗಳು ಖೋಪೋಲಿಯ ಇಮಾಜಿಕಾ ಥೀಮ್ ಪಾರ್ಕ್ಗೆ ಶೈಕ್ಷಣಿಕ ಪ್ರವಾಸಕ್ಕೆ ಹೋಗಿದ್ದಾಗ ಮಂಗಳವಾರ ಈ ಘಟನೆ ಸಂಭವಿಸಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಪ್ರವಾಸದ ವೇಳೆ ವಿದ್ಯಾರ್ಥಿ ಆಯುಷ್ ಧರ್ಮೇಂದ್ರ ಸಿಂಗ್ ಇದ್ದಕ್ಕಿದ್ದಂತೆ ನೆಲಕ್ಕೆ ಕುಸಿದುಬಿದ್ದಿದ್ದಾನೆ. ತಕ್ಷಣ ವಿದ್ಯಾರ್ಥಿಯನ್ನು ಉದ್ಯಾನವನದಲ್ಲಿದ್ದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಯಿತು. ಬಳಿಕ ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತು. ವಿದ್ಯಾರ್ಥಿ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದರು ಎಂದು ಅಧಿಕಾರಿ ತಿಳಿಸಿದ್ದಾರೆ.

ಮರಣೋತ್ತರ ಪರೀಕ್ಷೆಯಲ್ಲಿ ವಿದ್ಯಾರ್ಥಿ ಹೃದಯಾಘಾತದಿಂದ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ ಎಂದು ಅವರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.