ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಾರಾಷ್ಟ್ರ: 14ನೇ ಶತಮಾನದ ದೇಗುಲವೊಂದರ ಮರುನಿರ್ಮಾಣ

Published 16 ಮೇ 2024, 14:27 IST
Last Updated 16 ಮೇ 2024, 14:27 IST
ಅಕ್ಷರ ಗಾತ್ರ

ಛತ್ರಪತಿ ಸಂಭಾಜಿನಗರ: 52 ವರ್ಷಗಳ ಹಿಂದೆ ಜಯಕವಾಡಿ ಅಣೆಕಟ್ಟು ನಿರ್ಮಾಣದ ವೇಳೆ ಹಾನಿಗೊಂಡಿದ್ದ 14ನೇ ಶತಮಾನದ ಶಿವ ದೇಗುಲವನ್ನು ಜೀರ್ಣೋದ್ಧಾರಗೊಳಿಸಲಾಗುವುದು ಎಂದು ಭಾರತೀಯ ಪುರಾತತ್ವ ಇಲಾಖೆ ಗುರುವಾರ ತಿಳಿಸಿದೆ.

‘ಮಹಾರಾಷ್ಟ್ರದಲ್ಲಿ ಇದೇ ಮೊದಲ ಬಾರಿಗೆ ಇಂತಹ ಜೀರ್ಣೋದ್ಧಾರ ಕಾರ್ಯವನ್ನು ಕೈಗೊಳ್ಳಲಾಗುತ್ತಿದೆ’ ಎಂದು ಇಲಾಖೆ ಹೇಳಿದೆ.

‘ಶೆವ್ಟ ಮತ್ತು ಸಾವಖೇಡ ಗ್ರಾಮಗಳಲ್ಲಿದ್ದ ಎರಡು ದೇಗುಲಗಳು 1972ರಲ್ಲಿ ಅಣೆಕಟ್ಟು ನಿರ್ಮಾಣವಾದ ಬಳಿಕ ನೀರಿನಡಿ ಮುಳುಗಡೆಯಾಗಿದ್ದವು. ಆದರೆ, ದೇಗುಲದ ಕಲ್ಲುಗಳನ್ನು ಸಂರಕ್ಷಿಸಲಾಗಿತ್ತು’ ಎಂದು ತಿಳಿಸಿದೆ.

‘ಶೆವ್ಟದಲ್ಲಿನ ದೇಗುಲದ ಕಲ್ಲುಗಳಿಗೆ ಸಂಖ್ಯೆಗಳನ್ನು ನೀಡಲಾಗಿದ್ದು, ಇದರ ಆಧಾರದಲ್ಲಿ ದೇಗುಲ ಮರುನಿರ್ಮಾಣ ಮಾಡಲಾಗುವುದು. ರಾಜ್ಯ ಸರ್ಕಾರವು ₹3.53 ಕೋಟಿ ಅನುದಾನ ಬಿಡುಗಡೆ ಮಾಡಿದ್ದು, ಎರಡು–ಮೂರು ತಿಂಗಳಲ್ಲಿ ಕಾಮಗಾರಿ ಆರಂಭವಾಗುತ್ತದೆ’ ಎಂದು ಮಾಹಿತಿ ನೀಡಿದೆ.

ಜಯಕವಾಡಿ ಅಣೆಕಟ್ಟು ನಿರ್ಮಾಣದ ಬಳಿಕ ಸುಮಾರು 100 ಗ್ರಾಮಗಳು ಜಲಾವೃತಗೊಂಡಿದ್ದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT