ಮಂಗಳವಾರ, 16 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಅರುಣಾಚಲ ಪ್ರದೇಶ | 8ನೇ ತರಗತಿ ವಿದ್ಯಾರ್ಥಿಗಳಿಗೆ ಥಳಿತ: ಐವರ ಅಮಾನತು

Published 26 ಜೂನ್ 2024, 14:35 IST
Last Updated 26 ಜೂನ್ 2024, 14:35 IST
ಅಕ್ಷರ ಗಾತ್ರ

ಇಟಾನಗರ: ಅರುಣಾಚಲ ಪ್ರದೇಶದ ಚಾಂಗ್‌ಲಾಂಗ್‌ ಜಿಲ್ಲೆಯಲ್ಲಿರುವ ಜವಾಹರ ನವೋದಯ ವಿದ್ಯಾಲಯದ(ಜೆಎನ್‌ವಿ) ಹಾಸ್ಟೆಲ್‌ನಲ್ಲಿ ಹಿರಿಯ ವಿದ್ಯಾರ್ಥಿಗಳು 15 ಕಿರಿಯ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ ಆರೋಪ ಕೇಳಿಬಂದಿದೆ ಎಂದು ಪೊಲೀಸ್‌ ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ.

ಮಂಗಳವಾರ ಈ ಘಟನೆ ನಡೆದಿದೆ. ಘಟನೆಯಲ್ಲಿ ಪಾತ್ರವಿದೆ ಎನ್ನಲಾದ ಐವರು ಹಿರಿಯ ವಿದ್ಯಾರ್ಥಿಗಳನ್ನು ಅಮಾನತು ಮಾಡಲಾಗಿದೆ. ಹಲ್ಲೆಗೆ ಒಳಗಾಗಿರುವ ವಿದ್ಯಾರ್ಥಿಗಳಿಗೆ ಚಿಕಿತ್ಸೆ ಕೊಡಿಸಲಾಗಿದೆ ಎಂದು ವಿದ್ಯಾಲಯದ ಪ್ರಾಂಶುಪಾಲ ರಾಜೀವ್‌ ರಂಜನ್‌ ತಿಳಿಸಿದ್ದಾರೆ.

ಬೋರ್‌ದುಮ್ಸಾದಲ್ಲಿರುವ ಜವಾಹರ ನವೋದಯ ವಿದ್ಯಾಲಯದ ಹಾಸ್ಟೆಲ್‌ನಲ್ಲಿ 11ನೇ ತರಗತಿಯ ವಿದ್ಯಾರ್ಥಿಗಳು 8ನೇ ತರಗತಿಯ ವಿದ್ಯಾರ್ಥಿಗಳನ್ನು ಬಡಿಗೆಗಳಿಂದ ಥಳಿಸಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಚಾಂಗ್‌ಲಾಂಗ್‌ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT