ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಸ್‌ಎಐಎಲ್‌ನ ಬೊಕಾರೊ ಘಟಕದಲ್ಲಿ ಬೆಂಕಿ

Published 6 ಏಪ್ರಿಲ್ 2024, 16:13 IST
Last Updated 6 ಏಪ್ರಿಲ್ 2024, 16:13 IST
ಅಕ್ಷರ ಗಾತ್ರ

ಬೊಕಾರೊ, ಜಾರ್ಖಂಡ್‌: ಭಾರತೀಯ ಉಕ್ಕು ಪ್ರಾಧಿಕಾರದ (ಎಸ್‌ಎಐಎಲ್‌) ಬೊಕಾರೊ ಉಕ್ಕು ಘಟಕದಲ್ಲಿ ಶನಿವಾರ ಬೆಳಿಗ್ಗೆ ಬೆಂಕಿ ಹೊತ್ತಿಕೊಂಡಿದ್ದರಿಂದ, ಅಲ್ಲಿದ್ದ 15 ಮಂದಿ ಕಾರ್ಮಿಕರನ್ನು ವೈದ್ಯಕೀಯ ನಿಗಾದಲ್ಲಿ ಇರಿಸಲಾಗಿದೆ.

ಮಿಶ್ರಿತ ಅನಿಲ ಪೈಪ್‌ಲೈನ್‌ನ ನಿರ್ವಹಣಾ ಕಾರ್ಯದ ವೇಳೆ ಈ ಅವಘಡ ಸಂಭವಿಸಿದೆ. ಘಟನೆಯಲ್ಲಿ ಸಾವುನೋವಿನ ವರದಿಯಾಗಿಲ್ಲ ಎಂದು ಎಸ್‌ಎಐಎಲ್‌ ಅಧಿಕಾರಿಗಳು ತಿಳಿಸಿದ್ದಾರೆ. 

ಬೆಂಕಿ ನಂದಿಸಲಾಗಿದೆ. ನಿರ್ವಹಣಾ ಕಾರ್ಯದ ವೇಳೆ ಅನಿಲ ಸೋರಿಕೆಯಾಗಿಲ್ಲ. ಪರಿಸ್ಥಿತಿಯು ಸಂಪೂರ್ಣವಾಗಿ ಹತೋಟಿಯಲ್ಲಿದೆ. ಹಿರಿಯ ಅಧಿಕಾರಿಗಳು ಸ್ಥಳದಲ್ಲೇ ಉಪಸ್ಥಿತರಿದ್ದಾರೆ ಎಂದು ಅವರು ಹೇಳಿದ್ದಾರೆ.  

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT