ಹೈದರಾಬಾದ್: ತೀವ್ರ ಬಿಸಿಗಾಳಿಯಿಂದ ರಾಜ್ಯದಲ್ಲಿ 16 ಜನರು ಮೃತಪಟ್ಟಿದ್ದಾರೆ ಎಂದು ತೆಲಂಗಾಣ ಸಚಿವ ಪೊಂಗುಲೇಟಿ ಶ್ರೀನಿವಾಸ ರೆಡ್ಡಿ ಶನಿವಾರ ತಿಳಿಸಿದ್ದಾರೆ.

ಈ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿದ ರೆಡ್ಡಿ, ರಾಜ್ಯದ ಏಳು ಜಿಲ್ಲೆಗಳಲ್ಲಿ ಈ 16 ಸಾವುಗಳು ಸಂಭವಿಸಿವೆ ಎಂದು ಹೇಳಿದ್ದಾರೆ.

‘ಜಯಶಂಕರ್ ಭೂಪಾಲಪಲ್ಲಿ ಜಿಲ್ಲೆಯಲ್ಲಿ ನಾಲ್ಕು ಮಂದಿ ಮೃತಪಟ್ಟಿದ್ದಾರೆ. ಉಳಿದಂತೆ ವಾರಂಗಲ್ ಅರ್ಬನ್, ಕರೀಂನಗರ ಮತ್ತು ನಿಜಾಮಾಬಾದ್ನಲ್ಲಿ ತಲಾ ಮೂವರು ಹಾಗೂ ಜೋಗುಲಾಂಬ ಗದ್ವಾಲ್, ರಂಗಾರೆಡ್ಡಿ ಮತ್ತು ಸೂರ್ಯಪೇಟೆಯಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ’ ಎಂದು ತಿಳಿಸಿದ್ದಾರೆ.

ಮೃತರ ಕುಟುಂಬಸ್ಥರಿಗೆ ತಲಾ ₹4 ಲಕ್ಷ ಪರಿಹಾರ ಧನ ವಿತರಿಸಲಾಗುವುದು ಎಂದು ಹೇಳಿದ್ದಾರೆ.

ಬಿಸಿಗಾಳಿ ಎಂದರೆ?

ನಿರ್ದಿಷ್ಟ ಪ್ರದೇಶದಲ್ಲಿ ದಾಖಲಾಗುವ ಗರಿಷ್ಠ ಉಷ್ಣಾಂಶದ ಆಧಾರದಲ್ಲಿ ಭಾರತೀಯ ಹವಾಮಾನ ಇಲಾಖೆಯು ಬಿಸಿಗಾಳಿಯನ್ನು ವ್ಯಾಖ್ಯಾನಿಸುತ್ತದೆ. ಬಯಲು ಪ್ರದೇಶದ ವ್ಯಾಪ್ತಿಯಲ್ಲಿ ವಾತಾವರಣದ ಗರಿಷ್ಠ ತಾಪಮಾನ 40 ಡಿಗ್ರಿ ಸೆಲ್ಸಿಯಸ್ ಮತ್ತು ಅದಕ್ಕಿಂತ ಜಾಸ್ತಿ ಇದ್ದರೆ ಬಿಸಿಗಾಳಿ ಎಂದು ಘೋಷಣೆ ಮಾಡಲಾಗುತ್ತದೆ. ಕರಾವಳಿ ಪ್ರದೇಶಗಳಲ್ಲಿ ಬಿಸಿಗಾಳಿ ಇದೆ ಎಂದು ಕರೆಯಬೇಕಾದರೆ 37 ಡಿಗ್ರಿ ಸೆಲ್ಸಿಯಸ್ ಮತ್ತು ಅದಕ್ಕಿಂತ ಹೆಚ್ಚು ಉಷ್ಣತೆ ದಾಖಲಾಗಿರಬೇಕು. ಗಿರಿ ಪ್ರದೇಶಗಳಲ್ಲಿ 30 ಡಿಗ್ರಿ ಸೆಲ್ಸಿಯಸ್ ಮತ್ತು ಅದಕ್ಕಿಂತ ಹೆಚ್ಚು ತಾಪಮಾನ ಇದ್ದರೆ ಬಿಸಿಗಾಳಿ ಎಂದು ಕರೆಯಲಾಗುತ್ತದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.