ಶನಿವಾರ, 5 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ತ್ರಿಪುರಾ | 16 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ: ಇಬ್ಬರ ಬಂಧನ

Published : 13 ಸೆಪ್ಟೆಂಬರ್ 2024, 9:53 IST
Last Updated : 13 ಸೆಪ್ಟೆಂಬರ್ 2024, 9:53 IST
ಫಾಲೋ ಮಾಡಿ
Comments

ಅಗರ್ತಲಾ: 16 ವರ್ಷದ ಬಾಲಕಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ಉತ್ತರ ತ್ರಿಪುರಾ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

ಸಂತ್ರಸ್ತ ಬಾಲಕಿ ಧರ್ಮನಗರ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗುರುವಾರ ಮಧ್ಯಾಹ್ನ ಬಾಲಕಿ ಗ್ರಾಮದ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಳು. ಆಗ ಬೈಕ್‌ನಲ್ಲಿ ಬಂದ ಇಬ್ಬರು ಆಕೆಯನ್ನು ಅಪಹರಿಸಿ ಸಮೀಪದ ಕಾಡಿಗೆ ಕರೆದೊಯ್ದು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಬಳಿಕ ಬಾಲಕಿಯನ್ನು ಕಾಡಿನಲ್ಲಿಯೇ ಬಿಟ್ಟು ಪರಾರಿಯಾಗಿದ್ದಾರೆ ಎಂದು ಉತ್ತರ ತ್ರಿಪುರಾದ ಪೊಲೀಸ್ ವರಿಷ್ಠಾಧಿಕಾರಿ ಭಾನುಪಾದ ಚಕ್ರವರ್ತಿ ತಿಳಿಸಿದ್ದಾರೆ.

ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಬಾಲಕಿಯನ್ನು ನೋಡಿದ ಗ್ರಾಮಸ್ಥರು ಆಕೆಯ ಮನೆಯವರಿಗೆ ಮಾಹಿತಿ ನೀಡಿದ್ದಾರೆ.

ಗ್ರಾಮಸ್ತರು ಮಾಹಿತಿ ನೀಡಿದ ಬಳಿಕ ನಾವು ಘಟನಾ ಸ್ಥಳಕ್ಕೆ ಧಾವಿಸಿ ಆಕೆಯನ್ನು ರಕ್ಷಿಸಿ ಉಪಟಖಾಲಿ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದಿದ್ದೇವೆ. ಬಳಿಕ ಅಲ್ಲಿಂದ ಧರ್ಮ ನಗರ ಜಿಲ್ಲಾ ಆಸ್ಪತ್ರೆಗೆ ಕಳುಹಿಸಲಾಗಿದೆ. ಆಕೆಯ ಸ್ಥಿತಿ ಗಂಭೀರವಾಗಿದೆ ಎಂದು ಸಂತ್ರಸ್ತೆಯ ಸಹೋದರಿ ಮಾಹಿತಿ ನೀಡಿದ್ದಾರೆ.

ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ಈಗಾಗಲೇ ಇಬ್ಬರನ್ನು ಬಂಧಿಸಲಾಗಿದೆ. ಪ್ರಕರಣದ ಸೂಕ್ತ ತನಿಖೆಗಾಗಿ ತಂಡವನ್ನು ರಚಿಸಲಾಗಿದೆ ಎಂದು ಪೊಲೀಸ್‌ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT